ಕಾಲೇಜು ಮುಗಿಸಿ ಮೋಮೊಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

ಬೆಂಗಳೂರು: ನಗರದ ಮಡಿವಾಳ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದ ಬಗ್ಗೆ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂತ್ರಸ್ಥೆ ಯುವತಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದು, ಜೀವನ ನಿರ್ವಹಣೆಗಾಗಿ ಮೋಮೊಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಳು. ಈ ಸಂದರ್ಭದಲ್ಲಿ ಆಕೆಗೆ ಗೋಶ್ ಮತ್ತು ಅತುಲ್ ಎಂಬವರ ಪರಿಚಯವಾಗಿತ್ತು.

ಮೂವರೂ ಸ್ನೇಹಿತರು ಒಟ್ಟಾಗಿ ಪಾರ್ಟಿಯನ್ನು ಆಯೋಜಿಸಿದ್ದರು. ಪಾರ್ಟಿ ಮುಗಿದ ಬಳಿಕ ಗೋಶ್ ಮತ್ತು ಅತುಲ್ ಊಟ ತರಲು ಹೋಗಿದ್ದ ವೇಳೆ ಹೈನಾಸ್ ಎಂಬ ವ್ಯಕ್ತಿ ಆ ಯುವತಿಯ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಲಾಗಿದೆ.

ಘಟನೆ ಸಂಬಂಧ ಮಡಿವಾಳ ಪೊಲೀಸರು ತಕ್ಷಣವೇ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರೋಪಿ ಹೈನಾಸ್ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸಂತ್ರಸ್ಥೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

error: Content is protected !!