ವಿಳಾಸ ಕೇಳುವ ನೆಪದಲ್ಲಿ ಬಾಲಕನಿಗೆ ಇಂಜೆಕ್ಷನ್ ಚುಚ್ಚಿ ಪರಾರಿಯಾದ ಮುಸುಕುಧಾರಿ ತಂಡ

ಹುಬ್ಬಳ್ಳಿ: 10 ವರ್ಷದ ಬಾಲಕನಿಗೆ ಅಪರಿಚಿತ ಮುಸುಕುಧಾರಿಗಳು ಇಂಜೆಕ್ಷನ್ ಚುಚ್ಚಿ ಪರಾರಿಯಾದ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ತರ್ಲಘಟ್ಟ ಗ್ರಾಮದಲ್ಲಿ ನಡೆದಿದೆ.

ಮಣಿಕಂಠ ಗಾಣಿಗೇರ (10) ಎಂಬ ಬಾಲಕನಿಗೆ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದಿದ್ದ ಇಬ್ಬರು ಮುಸುಕುಧಾರಿಗಳು ವಿಳಾಸ ಕೇಳುವ ನೆಪದಲ್ಲಿ ಆತನನ್ನು ತಡೆದು ನಿಲ್ಲಿಸಿ, ಬಳಿಕ ಬಾಲಕನ ಬಾಯಿಯನ್ನು ಗಟ್ಟಿಯಾಗಿ ಹಿಡಿದು ಇಂಜೆಕ್ಷನ್ ಚುಚ್ಚಿ ಪರಾರಿಯಾಗಿದ್ದಾರೆ. ಘಟನೆಯ ಬಳಿಕ ಬಾಲಕನನ್ನು ಕುಂದಗೋಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬಾಲಕನಿಗೆ ಯಾವ ಇಂಜೆಕ್ಷನ್ ಹಾಕಲಾಗಿದೆ ಎಂಬ ಬಗ್ಗೆ ಪೋಷಕರಲ್ಲಿ ಆತಂಕ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!