ಕರ್ನಾಟಕದ 4 ಸ್ಥಾನ ಸೇರಿ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ಸೇರಿ ಹತ್ತು ರಾಜ್ಯಗಳಲ್ಲಿ ಖಾಲಿಯಾಗಲಿರುವ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಿದೆ.

ಜೂನ್‌ 18 ರಂದು ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳಲಿದೆ. ನಾಮಪತ್ರ ಸಲ್ಲಿಕೆಗೆ ಜೂನ್ 8 ಕ್ಕೆ ಕಡೆಯ ದಿನಾಂಕವಾಗಿದ್ದು, ಜೂನ್ 9 ನಾಮಪತ್ರ ಪರಿಶೀಲನೆ ನಡೆಯಲಿದೆ ಹಾಗೂ ಜೂನ್ 11 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ.

ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಮೂರು ಮತ್ತು ಬಿಜೆಪಿಗೆ ಒಂದು ಸ್ಥಾನ ಸಿಗಲಿದೆ. ಕಾಂಗ್ರೆಸ್‌ಗೆ ಸಿಗುವ ಮೂರು ಸ್ಥಾನಗಳ ಪೈಕಿ ಒಂದು ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಮುಂದುವರಿಸುವ ಸಾಧ್ಯತೆ ಇದೆ. ಬಾಕಿ ಎರಡು ಸ್ಥಾನಗಳಿಗೆ ಪೈಪೋಟಿ ನಡೆಯಲಿದ್ದು, ಬಿಜೆಪಿಗೆ ಸಿಗುವ ಒಂದು ಸ್ಥಾನದ ಮೇಲೆ ಜೆಡಿಎಸ್ ಕಣ್ಣಿಟ್ಟಿದೆ.

error: Content is protected !!