
ಬೆಳ್ಳಾರೆ: ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಉದ್ಯೋಗದಲ್ಲಿದ್ದ ಬೆಳ್ಳಾರೆ ನಿವಾಸಿ ಸೂರಜ್ ರೈ (27) ಅವರು ಬೈಕ್ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಇಂದು(ಮೇ 22) ಮುಂಜಾನೆ ನಿಧನರಾದರು.

ಮೇ 15ರಂದು ರಾತ್ರಿ ಬೆಂಗಳೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕುಣಿಗಲ್ ಸಮೀಪ ಕೋಳಿ ಸಾಗಾಟದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಗಾಯಗಳಾಗಿದ್ದು, ತಕ್ಷಣ ಕುಣಿಗಲ್‌ನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮುಂಜಾನೆ ಮೃತಪಟ್ಟಿದ್ದಾರೆ.

ಮೃತರ ಪಾರ್ಥಿವ ಶರೀರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೆಳ್ಳಾರೆಗೆ ತಲುಪಲಿದ್ದು, ಬಳಿಕ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
