ವೈದ್ಯರ ಮೇಲೆ ಹಲ್ಲೆ ನಡೆಸಿದ ಯುವಕರ ಗುಂಪು; ಪ್ರಕರಣ ದಾಖಲು

ಬೀದರ್: ಓಪಿಡಿ ಚೀಟಿ ವಿಚಾರಕ್ಕಾಗಿ ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಕಿಡಿಗೇಡಿ ಯುವಕರ ಗುಂಪೊಂದು ವೈದ್ಯರ ಮೇಲೆ ಹಲ್ಲೆ ನಡೆಸಿರುವ ಘಟನೆ ಗುರುವಾರ(ಮೇ 21) ಮಧ್ಯರಾತ್ರಿ ನಡೆದಿದೆ.

ಬೈಕ್‌ನಿಂದ ಬಿದ್ದು ಅಲ್ಪ ಗಾಯಗಳೊಂದಿಗೆ ಬ್ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ಯುವಕರು, ಎಂಎಲ್ಸಿ ದಾಖಲಿಸದಂತೆ ಒತ್ತಾಯಿಸಿದ್ದರು. ಆದರೆ ಆಸ್ಪತ್ರೆಯ ಲ್ಯಾಬ್ ಸಿಬ್ಬಂದಿ ಎಂಎಲ್‌ಸಿ ಮಾಡಲಾಗಿದೆ ಎಂದು ತಪ್ಪು ಮಾಹಿತಿ ನೀಡಿದ್ದರಿಂದ ಆಕ್ರೋಶಗೊಂಡ ಯುವಕರು, ತಾವು ಎಂಎಲ್‌ಸಿ ಮಾಡಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದರೂ ಕೇಳದೆ ವೈದ್ಯ ತುಕಾರಾಮ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಹಲ್ಲೆ ನಡೆಸಿದ ಏಳು ಜನ ಕಿಡಿಗೇಡಿಗಳ ವಿರುದ್ಧ ನಗರದ ನೂತನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆ ಘಟನೆ ಖಂಡಿಸಿ ವೈದ್ಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

error: Content is protected !!