51 ಸಾವಿರ ಅತಿಥಿ ಶಿಕ್ಷಕರ ತಾತ್ಕಾಲಿಕ ನೇಮಕಾತಿಗೆ ರಾಜ್ಯ ಸರಕಾರ ಆದೇಶ

ಬೆಂಗಳೂರು: ರಾಜ್ಯದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಸಮಸ್ಯೆ ಪರಿಹರಿಸುವ ಉದ್ದೇಶದಿಂದ 51 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ.

2026-27ನೇ ಶೈಕ್ಷಣಿಕ ವರ್ಷ ಮೇ ತಿಂಗಳಿನಿಂದಲೇ ಆರಂಭವಾಗುತ್ತಿರುವುದರಿಂದ, ಶಾಲೆಗಳ ಆರಂಭದಲ್ಲೇ ಶಿಕ್ಷಕರ ಕೊರತೆಯಾಗದಂತೆ ನೋಡಿಕೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈ ಮಹತ್ವದ ಕ್ರಮ ಕೈಗೊಂಡಿದೆ. ಪ್ರಾಥಮಿಕ ಶಾಲೆಗಳಿಗೆ 40 ಸಾವಿರ ಹಾಗೂ ಪ್ರೌಢಶಾಲೆಗಳಿಗೆ 11 ಸಾವಿರ ಶಿಕ್ಷಕರ ನೇಮಕಾತಿಗೆ ಸರಕಾರ ಮಂಜೂರಾತಿ ನೀಡಿದೆ.

ಈ ನೇಮಕಾತಿಯು ತಾತ್ಕಾಲಿಕ ವ್ಯವಸ್ಥೆಯಾಗಿದ್ದು, ಖಾಯಂ ಶಿಕ್ಷಕರು ನೇಮಕವಾಗುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ವರ್ಷದ (2026-27) ಅಂತ್ಯದವರೆಗೆ ಮಾತ್ರ ಅನ್ವಯಿಸುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

error: Content is protected !!