7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ವಶಕ್ಕೆ

ಉಪ್ಪಿನಂಗಡಿ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ ಯಾನೆ ಬೋಜ ಅಕ್ರ ಬಂಧಿತ ಆರೋಪಿ.

ಪೊಲೀಸರು ಆರೋಪಿಯನ್ನು ಮಂಗಳೂರಿನ ಪಣಂಬೂರಿನಲ್ಲಿ ದಸ್ತಗಿರಿ ಮಾಡಲಾಗಿದ್ದು, ಠಾಣಾ ಅಕ್ರ:158/2015 ಕಲಂ: 457, 380 ಐಪಿಸಿ ಪ್ರಕರಣ ದಾಖಲಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಆರೊಪಿಯ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿರುತ್ತದೆ.

error: Content is protected !!