
ಜೈಪುರ: ಸ್ಕಾರ್ಪಿಯೋ ಎಸ್‌ಯುವಿ ಕಾರು ಸುಮಾರು 700 ಅಡಿ ಕಂದಕಕ್ಕೆ ಉರುಳಿದ ಘಟನೆ ಮಹಾರಾಷ್ಟ್ರದ ರಾಯಗಡದ ಮಹಾಬಲೇಶ್ವರ ಮತ್ತು ಪೋಲಾದ್‌ಪುರದ ನಡುವೆ ಇರುವ ಅಂಬೆನಾಲಿ ಘಾಟ್ ನಡೆದಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ 8 ಮಂದಿಯೂ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಸತಾರಾ ಜಿಲ್ಲೆಯ ಮೂಲದವರಾದ ಅಂಶ್ ಸಮೀರ್ ಚವ್ಹಾಣ್ (19), ರಿತೇಶ್ ರಾಜೇಂದ್ರ ಲೋಖಂಡೆ (22), ಸುಹಾಸ್ ಜಿತೇಂದ್ರ ಲೋಖಂಡೆ (20), ಉತ್ಕರ್ಷ್ ಆನಂದ್ ಶಿಂಗ್ಟೆ (21), ನಿಖಿಲ್ ಅಭಿಮನ್ಯು ಶಿಂಗ್ಟೆ (25), ಮಹೇಶ್ ಅನಿಲ್ ಪವಾರ್ (25), ಆದಿತ್ಯ ಅಶೋಕ್ ಸಾಳುಂಖೆ (21), ರಾಜೇಶ್ ಅಶೋಕ್ ಕಾಟ್ಕರ್ (35) ಮೃತರು.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡಗಳು ಹಾಗೂ ಸ್ಥಳೀಯ ಪೊಲೀಸರು ಶೋಧ ಆರಂಭಿಸಿದ್ದಾರೆ.
