ಲಾರಿಯ ಹಿಂಭಾಗಕ್ಕೆ ಸ್ಕೂಟರ್‌ ಡಿಕ್ಕಿ; ಸವಾರ ಸಾ*ವು

ವಿಟ್ಲ: ಕಲ್ಲಡ್ಕದಿಂದ ಪುತ್ತೂರಿನತ್ತ ಬರುತ್ತಿದ್ದ ಸ್ಕೂಟರ್‌ ಲಾರಿಯ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರೊಬ್ಬರು ಮೃತಪಟ್ಟಿರುವ ಘಟನೆ ಮಾಣಿ ಸಮೀಪ ಭಾನುವಾರ(ಮೇ 24) ಸಂಭವಿಸಿದೆ.

ಸುಳ್ಯ ನಿವಾಸಿ ಕಲಂದರ್ ಶಾ ಮೃತ ಸವಾರ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಲಂದರ್ ಶಾ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅವರು ಮೂಲತಃ ಸುಳ್ಯ ನಿವಾಸಿಯಾಗಿದ್ದು, ಪ್ರಸ್ತುತ ಪುತ್ತೂರಿನ ಕಲ್ಲರ್ಪೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮಂಗಳೂರು ಧಕ್ಕೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಘಟನೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

error: Content is protected !!