ʻಟ್ಯಾಬ್ಲೆಟ್ ಆರೀಫ್’ ಮರ್ಡರ್ ಕೇಸ್: ಹಂತಕರಿಗೆ ಫಂಡಿಂಗ್ ಮಾಡಿದ್ದ ಟೊಪ್ಪಿ ನೌಫಾಲ್ ಸಹೋದರ ಸಿಸಿಬಿ ಬಲೆಗೆ!

ʻಟ್ಯಾಬ್ಲೆಟ್ ಆರೀಫ್' ಮರ್ಡರ್ ಕೇಸ್: ಹಂತಕರಿಗೆ ಫಂಡಿಂಗ್ ಮಾಡಿದ್ದ ಟೊಪ್ಪಿ ನೌಫಾಲ್ ಸಹೋದರ ಸಿಸಿಬಿ ಬಲೆಗೆ!

ಮಂಗಳೂರು: ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ನಡೆದ ಉಚ್ಚಿಲ್ ಮುಳ್ಳುಗುಡ್ಡೆ ನಿವಾಸಿ ಆರಿಫ್ ಹುಸೈನ್ ಅಲಿಯಾಸ್ ʻಟ್ಯಾಬ್ಲೆಟ್ ಆರೀಫ್ʼ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಸೋಮವಾರ ಬಂಧಿಸಿದ್ದಾರೆ. ಬಜಾಲ್ ಶಾಂತಿನಗರ ನಿವಾಸಿ ಇಬ್ರಾಹಿಂ ಸಿನಾನ್ ಯಾನೆ ಚಿನ್ನು (21) ಬಂಧಿತ ಆರೋಪಿಯಾಗಿದ್ದಾನೆ. ಈತ ಮೃತ ರೌಡಿಶೀಟರ್ ಟೊಪ್ಪಿ ನೌಫಾಲ್‌ನ ಸಹೋದರ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ʻಟ್ಯಾಬ್ಲೆಟ್ ಆರೀಫ್' ಮರ್ಡರ್ ಕೇಸ್: ಹಂತಕರಿಗೆ ಫಂಡಿಂಗ್ ಮಾಡಿದ್ದ ಟೊಪ್ಪಿ ನೌಫಾಲ್ ಸಹೋದರ ಸಿಸಿಬಿ ಬಲೆಗೆ!

ಆರೋಪಿ ಇಬ್ರಾಹಿಂ ಸಿನಾನ್, 2026ರ ಫೆಬ್ರವರಿ ತಿಂಗಳಲ್ಲಿ ಆರಿಫ್ ಹುಸೇನ್‌ನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದ ವೇಳೆ ಹಾಜರಿದ್ದ ಎನ್ನಲಾಗಿದೆ. ಅಲ್ಲದೆ, ಮಾರ್ಚ್‌ 27 ರಂದು ನಡೆದ ಕೊಲೆ ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳಿಗೆ ಈತ ಹಣಕಾಸಿನ ನೆರವು ನೀಡಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಬಂಧಿತನ ವಿರುದ್ಧ ಈಗಾಗಲೇ 2025ರಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣ ಹಾಗೂ 2024ರಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ಸೇರಿದಂತೆ ಒಟ್ಟು ಎರಡು ಪ್ರಕರಣಗಳು ದಾಖಲಾಗಿವೆ.

ಕೊಲೆ ಕೃತ್ಯ ನಡೆದದ್ದು ಹೇಗೆ?
ಮಾಚ್೯ 27ರಂದು ಬೆಳಗಿನ ಜಾವ, ತೊಕ್ಕೊಟ್ಟು ಪ್ಲೈಓವರ್ ಬಳಿ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಆರೀಫ್‌ನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಭೀಕರವಾಗಿ ಕೊಲೆಗೈದಿದ್ದರು. ಕೃತ್ಯ ಎಸಗಿದ ಬಳಿಕ ಆರೋಪಿಗಳು ತಾವು ಬಳಸಿದ ಕಾರನ್ನು ಬಂಟ್ವಾಳ ತಾಲೂಕಿನ ಬುಡೋಳಿ ಪ್ರದೇಶದಲ್ಲಿ ಬಿಟ್ಟು ಪರಾರಿಯಾಗಿದ್ದರು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಪ್ರಕರಣದ ತನಿಖೆಯನ್ನು ಸಿಸಿಬಿ ಘಟಕಕ್ಕೆ ವರ್ಗಾಯಿಸಲಾಗಿದೆ.

11 ಆರೋಪಿಗಳು ಈಗಾಗಲೇ ಜೈಲಿಗೆ, ‘ಕೋಕಾ’ ಅಸ್ತ್ರ
ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಿಫಾತ್ ಆಲಿ, ಇಬ್ರಾಹಿಂ ಖಲೀಲ್, ಅಶ್ಫಕ್ ಯಾನೆ ಜುಟ್ಟು ಅಶ್ಫಕ್, ಉಮ್ಮರ್ ಫಾರೂಕ್ ಇರ್ಫಾನ್, ಶಾಕೀರ್, ರಿಝ್ವಾನ್, ಇರ್ಷಾದ್ ಯಾನೆ ಅಕುಡು, ಹರ್ಷಾದ್, ನಿಶಾಕ್ ಯಾನೆ ಪುಚ್ಚೆ ನಿಶಾಕ್, ಬಿ. ಜುನೈದ್ ಯಾನೆ ಕೊಕ್ಕಡ ಜುನೈದ್ ಹಾಗೂ ಸುಹೇಲ್ ಯಾನೆ ಚಿಯಾ ಎಂಬವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳ ವಿರುದ್ಧ ಅತ್ಯಂತ ಕಠಿಣವಾದ “ಕೋಕಾ ಕಾಯಿದೆ” (KCOCA) ಅಡಿಯಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

qfyA

error: Content is protected !!