KSOU ಪರೀಕ್ಷಾ ಕೇಂದ್ರದಲ್ಲಿ ಹಣ ಪಡೆದು ನಕಲು ಮಾಡಲು ಮುಕ್ತ ಅವಕಾಶ!!

ಕೋಲಾರ: ಕೋಲಾರದ ಟಮಕಾ ಬಳಿಯಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಪ್ರಾದೇಶಿಕ ಕಚೇರಿಯ ಪರೀಕ್ಷಾ ಕೇಂದ್ರದಲ್ಲಿ ಬಿಎ, ಬಿಕಾಂ, ಬಿಸ್ಸಿ ಮತ್ತು ಬಿಬಿಎ ಸೇರಿದಂತೆ ಪ್ರಮುಖ ಪದವಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ನಕಲು ಮಾಡಲು ಮುಕ್ತ ಅವಕಾಶ ಮಾಡಿಕೊಡುತ್ತಿರುವುದು ಬೆಳಕಿಗೆ ಬಂದಿದೆ.

ಖಾಸಗಿಯಾಗಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಪರೀಕ್ಷಾ ಮೇಲ್ವಿಚಾರಕರು ವಸೂಲಿ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪರೀಕ್ಷಾ ಕೊಠಡಿಯೊಳಗೆ ಮೊಬೈಲ್ ಫೋನ್ ಮತ್ತು ಪುಸ್ತಕಗಳನ್ನು ಕೊಂಡೊಯ್ಯಲು ಒಂದು ಪೇಪರ್​​ಗೆ 1,000 ದಿಂದ 1,500 ರೂಪಾಯಿಗಳವರೆಗೆ ದರ ನಿಗದಿ ಮಾಡಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ.

ಹಣ ನೀಡಿದ ವಿದ್ಯಾರ್ಥಿಗಳಿಗೆ ಯಾವುದೇ ಭಯವಿಲ್ಲದೆ ಮಾಸ್ ಕಾಪಿ ಮಾಡಲು ಮೇಲ್ವಿಚಾರಕರು ಸಹಕರಿಸುತ್ತಿದ್ದು, ಸದ್ಯ ಪರೀಕ್ಷಾ ಕೇಂದ್ರದ ಒಳಗಡೆ ವಿದ್ಯಾರ್ಥಿಗಳಿಂದ ಮೇಲ್ವಿಚಾರಕರುಗಳಾದ ವಿನೋದ್ ಸಿಂಗ್, ರಾಜೇಂದ್ರ, ಪುನಿತ್ ಮತ್ತು ನಂದಿನಿ ಎಂಬುವವರು ಹಣ ವಸೂಲಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

error: Content is protected !!