ಕರ್ನಾಟಕದ ವಿಧಾನಪರಿಷತ್ ಚುನಾವಣೆ ದಿನಾಂಕ ಪ್ರಕಟ: 7 ಸ್ಥಾನಗಳಿಗೆ ಚುನಾವಣೆ

ಬೆಂಗಳೂರು: ಕರ್ನಾಟಕದ ವಿಧಾನಪರಿಷತ್ ಚುನಾವಣೆ ದಿನಾಂಕ ಪ್ರಕಟಗೊಂಡಿದ್ದು, ಜೂನ್ 18ರಂದು ಚುನಾವಣೆ ನಡೆಯಲಿದೆ.

ಜೂನ್ 26ರಂದು ತೆರವಾಗಲಿರುವ ವಿಧಾನಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆ ನಡೆಸಲಾಗುತ್ತಿದ್ದು, ಕಾಂಗ್ರೆಸ್‌-3, ಬಿಜೆಪಿ-3 ಮತ್ತು ಜೆಡಿಎಸ್‌-1 ಸದಸ್ಯರ ಅವಧಿ ಮುಕ್ತಾಯಗೊಳ್ಳಲಿದೆ.

ಜೂನ್ 8 ನಾಮಪತ್ರ ಸಲ್ಲಿಕೆಗೆ ಕೊನೇ ದಿನಾಂಕವಾಗಿದ್ದು, ಜೂನ್ 9ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 11 ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿದೆ. ಜೂನ್ 18 ರಂದು ಮತದಾನ ನಡೆಯಲಿದ್ದು, ಅದೇ ದಿನ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

error: Content is protected !!