
ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಬಾಲಕ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ ನಡೆದಿದೆ.

ಬಂಗಾರಪೇಟೆ ಮೂಲದ ಮುಜಾಮಿಲ್ (9) ಮೃತ ಬಾಲಕ. ಸಯ್ಯದ್ ಉಲ್ಲಾ, ಸಯ್ಯದ್ ಅಫ್ರಿದ್, ಯಾಸ್ಮಿನ್ ಹಾಗೂ ಅಸೀಬಾ ಗಾಯಾಳು.

ಅಪಘಾತದ ವೇಳೆ ಇನ್ನೋವಾ ಕಾರಿನಲ್ಲಿದ್ದ ನಾಲ್ಕು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಕೋಲಾರದ ಎಸ್‌ಎನ್‌ಆರ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
