
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಲವೆಡೆ ಮಂಗಳವಾರ(ಮೇ 26) ಸಂಜೆ ಹಾಗೂ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ರನ್‌ವೇ ಸ್ಪಷ್ಟವಾಗಿ ಕಾಣಿಸದೆ ವಿಮಾನಗಳ ಟೇಕಾಫ್ ಹಾಗೂ ಲ್ಯಾಂಡಿಂಗ್ ಪ್ರಕ್ರಿಯೆಯಲ್ಲಿ ಭಾರಿ ವಿಳಂಬವಾಗಿದ್ದು, ಅನೇಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ.

ಏರ್‌ಪೋರ್ಟ್‌ನ ಟರ್ಮಿನಲ್-1 ರ ಮೇಲ್ಛಾವಣಿಯಲ್ಲಿ ನೀರು ಸೋರಲು ಆರಂಭಿಸಿ ಟರ್ಮಿನಲ್ ಒಳಗೆಲ್ಲ ನೀರು ತುಂಬಿಕೊಂಡು ಪ್ರಯಾಣಿಕರು ಪರದಾಡುವಂತಾಗಿದೆ. ಟರ್ಮಿನಲ್ ಛಾವಣಿ ಸೋರುತ್ತಿರುವ ಮತ್ತು ಒಳಗೆ ಜಲಪ್ರವಾಹ ಸಂಭವಿಸಿದ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

