ಸರ್ವಿಸ್ ಬಸ್‌ಗೆ ಟಿಪ್ಪರ್ ಲಾರಿ ಡಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಮಂಗಳೂರು: ಟಿಪ್ಪರ್ ಲಾರಿಯೊಂದು ಸರ್ವಿಸ್ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಇಂದು(ಮೇ 27) ಹಳೆಯಂಗಡಿಯ ಇಂದಿರಾ ನಗರ ಬಸ್ ನಿಲ್ದಾಣದ ಬಳಿ  ನಡೆದಿದೆ.

ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸರ್ವಿಸ್ ಬಸ್, ಇಂದಿರಾ ನಗರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ನಿಂತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್ ಲಾರಿ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಡಿಕ್ಕಿಯ ಪರಿಣಾಮವಾಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳು ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಮುಕ್ಕದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

error: Content is protected !!