ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ!!

ಬೆಂಗಳೂರು: ಸಿದ್ದರಾಮಯ್ಯ ನಾಳೆ ಬೆಳಗ್ಗೆ 11:30ಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅಧಿಕೃತವಾಗಿದೆ.

ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಮೊದಲು ಸಿದ್ದರಾಮಯ್ಯ ತಮ್ಮ ಮಂತ್ರಿಗಳಿಗೆ ಮತ್ತು ಆಪ್ತ ಶಾಸಕರಿಗೆ ಉಪಹಾರಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. ಈ ಬಳಿಕ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ. ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ.

ಇಂದು ಮಾಜಿ ಪ್ರಧಾನಿ ಜವಹರಲಾಲ್ ನೆಹರೂ ಅವರ 62ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದರು. ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದ ಬಳಿಕ ನೆಹರೂ ಅವರು ದೇಶಕ್ಕೆ ನೀಡಿದ ಕೊಡುಗೆಯನ್ನು ಕೊಂಡಾಡಿದರು. ಈ ವೇಳೆ ಮಾಧ್ಯಮಗಳು ರಾಜ್ಯ ರಾಜಕೀಯದ ಸದ್ಯದ ಬೆಳವಣಿಗೆಗಳು, ದೆಹಲಿ ಪ್ರವಾಸದ ಬಗ್ಗೆ ಪ್ರಶ್ನಿಸಿದಾಗ ಮುಖ್ಯಮಂತ್ರಿಗಳು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

ರಾಜಕೀಯ ವಿದ್ಯಮಾನಗಳ ಕುರಿತು ಕೇಳಿದಾಗ, “ನಾಳೆ ಮಾತನಾಡುತ್ತೇನೆ, ಏನೇ ಇದ್ದರೂ ನಾಳೆಯೇ ಮಾತನಾಡುತ್ತೇನೆ” ಎಂದು ಕೇವಲ ಒಂದೇ ಸಾಲಿನಲ್ಲಿ ಉತ್ತರಿಸಿದ್ದಾರೆ.

error: Content is protected !!