
ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋಗೆ 230 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ತಾಂತ್ರಿಕ ದೋಷದಿಂದಾಗಿ ಎಂಟು ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿ ಮತ್ತೆ ದೆಹಲಿಗೆ ವಾಪಸಾಗಿದೆ.

ಚೀನಾ ವಾಯುಪ್ರದೇಶದಿಂದ ವಾಪಸ್ ಮಾಹಿತಿಯ ಪ್ರಕಾರ, ಮೇ 27 ರಂದು ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ‘AI173’ ವಿಮಾನವು ನಿಗದಿತ ಸಮಯಕ್ಕೆ ಟೇಕ್ ಆಫ್ ಆಗಿತ್ತು. ಆದರೆ, ಚೀನಾದ ವಾಯುಪ್ರದೇಶದಲ್ಲಿ ಸುಮಾರು ಮೂರು ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿದ ನಂತರ ವಿಮಾನದಲ್ಲಿ ತಾಂತ್ರಿಕ ದೋಷ ಇರುವುದು ಪೈಲಟ್‌ಗಳ ಗಮನಕ್ಕೆ ಬಂದಿದೆ. ನಿಗದಿತ ತುರ್ತು ಕಾರ್ಯವಿಧಾನಗಳಿಗೆ ಅನುಗುಣವಾಗಿ, ತಕ್ಷಣವೇ ವಿಮಾನವನ್ನು ದೆಹಲಿಯ ಕಡೆಗೆ ತಿರುಗಿಸಲು ನಿರ್ಧರಿಸಲಾಯಿತು. ಸುಮಾರು 8 ಗಂಟೆಗಳ ದೀರ್ಘ ಹಾರಾಟದ ನಂತರ ವಿಮಾನವು ಸುರಕ್ಷಿತವಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಯಿತು.

ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ವಿಮಾನಯಾನ ಸಂಸ್ಥೆಯು ತನ್ನ ಪ್ರಯಾಣಿಕರು ಮತ್ತು ಸಿಬ್ಬಂದಿಗಳ ಸುರಕ್ಷತೆಯೇ ತನಗೆ ಅತ್ಯುನ್ನತ ಆದ್ಯತೆ ಎಂದು ಒತ್ತಿಹೇಳಿದೆ. ಹಠಾತ್ ಆದ ಈ ಬದಲಾವಣೆಯಿಂದ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿರುವ ಏರ್ ಇಂಡಿಯಾ, ತಕ್ಷಣವೇ ಕಾರ್ಯಪ್ರವೃತ್ತವಾಗಿ ಪರ್ಯಾಯ ವ್ಯವಸ್ಥೆಗಳನ್ನು ಮಾಡಿದೆ.

ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.