ಮಾಜಿ ಪ್ರೇಯಸಿಯ ಭೇಟಿಗೆ ತೆರಳಿದ ವ್ಯಕ್ತಿಯನ್ನು ಕೊಲೆಗೈದ ಪತಿ-ಕುಟುಂಬಸ್ಥರು

ಬೆಂಗಳೂರು: ಮಾಜಿ ಪ್ರೇಯಸಿಯನ್ನು ಭೇಟಿಯಾಗಲು ಆಕೆಯ ಮನೆಗೆ ತೆರಳಿದ್ದ ಯುವಕನೋರ್ವ ಪ್ರೇಯಸಿಯ ಪತಿ ಹಾಗೂ ಆಕೆಯ ಕುಟುಂಬಸ್ಥರಿಂದ ಮಾರಣಾಂತಿಕ ಹಲ್ಲೆಗೀಡಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೊಹಮ್ಮದ್ ಖಾಸಿಂ ಈ ಹಿಂದೆ ಯುವತಿಯೊಬ್ಬಳ ಜೊತೆ ಪ್ರೇಮ ಸಂಬಂಧದಲ್ಲಿದ್ದ ಎನ್ನಲಾಗಿದೆ. ಆದರೆ ಕೆಲವು ಕಾರಣಗಳಿಂದಾಗಿ ಇಬ್ಬರ ಸಂಬಂಧ ಬಿಟ್ಟಿತ್ತು. ತದನಂತರ ಯುವತಿಗೆ ಬೇರೆ ವ್ಯಕ್ತಿಯೊಂದಿಗೆ ವಿವಾಹವಾಗಿತ್ತು. ಮದುವೆಯಾಗಿ ಪತಿಯೊಂದಿಗೆ ಆಕೆ ಬೆಂಗಳೂರಿನಲ್ಲಿ ವಾಸವಾಗಿದ್ದಳು. ಇತ್ತೀಚೆಗೆ ಖಾಸಿಂ ಆಕೆಯನ್ನು ಭೇಟಿಯಾಗಲು ಯತ್ನಿಸುತ್ತಿದ್ದ ಎನ್ನಲಾಗಿದೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಘಟನೆಯ ದಿನದಂದು ಖಾಸಿಂ ಯಾರಿಗೂ ತಿಳಿಸದೆ ನೇರವಾಗಿ ಬೆಂಗಳೂರಿನಲ್ಲಿರುವ ಆಕೆಯ ಮನೆಗೆ ಭೇಟಿ ನೀಡಿದ್ದ. ಈ ವೇಳೆ ಮನೆಯಲ್ಲಿದ್ದ ಆಕೆಯ ಪತಿ ಮತ್ತು ಕುಟುಂಬದ ಇತರ ಸದಸ್ಯರು ಆತನನ್ನು ನೋಡಿ ತೀವ್ರ ಆಕ್ರೋಶಗೊಂಡಿದ್ದರು. ಹಳೇ ಪ್ರೇಮಿಯ ಆಗಮನದಿಂದ ದಂಪತಿ ನಡುವೆ ಗಲಾಟೆ ಶುರುವಾಗಿದ್ದು, ಅದು ವಿಕೋಪಕ್ಕೆ ತಿರುಗಿತ್ತು.

ಯುವತಿಯ ಪತಿ ಮತ್ತು ಆಕೆಯ ಸಂಬಂಧಿಕರು ಕೋಪದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಹಲ್ಲೆಯಿಂದಾಗಿ ಗಂಭೀರವಾಗಿ ಗಾಯಗೊಂಡ ಯುವಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು, ಕೃತ್ಯ ಎಸಗಿದವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

error: Content is protected !!