
ಲಕ್ನೋ: ಚಂಡಮಾರುತಕ್ಕೆ ಸಿಕ್ಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಹಲವಾರು ಮಂದಿ ಕಾರ್ಮಿಕರು ಸೇತುವೆಯ ಅವಶೇಷಗಳ ಅಡಿ ಸಿಲುಕಿಕೊಂಡಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ.
ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಹಮೀರ್‌ಪುರದ ಮೋರಾ ಕಂದರ್ ಮತ್ತು ಕುರಾರಾ ಪ್ರದೇಶಗಳನ್ನ ಸಂಪರ್ಕಿಸಲು ಸಾರ್ವಜನಿಕರಿಗೆ ಅನುಕೂಲವಾಗಲೆಂದು ನಿರ್ಮಿಸುತ್ತಿದ್ದಂತಹ ಹೊಸ ಸೇತುವೆ ಗುರುವಾರ(ಮೇ 28) ತಡರಾತ್ರಿ ಬಲವಾದ ಬಿರುಗಾಳಿ ಅಪ್ಪಳಿಸಿದ ಪರಿಣಾಮ ಬೃಹತ್ ಸ್ಲ್ಯಾಬ್ ಕುಸಿದು ಬಿದ್ದಿದೆ. ಘಟನೆಯಲ್ಲಿ 6 ಕಾರ್ಮಿಕರು ಸಾವನ್ನಪ್ಪಿದ್ದು, ಇನ್ನೂ ಅನೇಕರು ಅವಶೇಷಗಳ ಅಡಿಯಲ್ಲೇ ಸಿಲುಕಿರುವ ಶಂಕೆ ಇದೆ. ಹೀಗಾಗಿ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಸ್ಥಳೀಯ ಆಡಳಿತ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ ರಕ್ಷಣೆಗೆ ಬೃಹತ್ ಕಾರ್ಯಾಚರಣೆ ಕೈಗೊಂಡಿದೆ
.