ಚಲಿಸುತ್ತಿದ್ದ ಕಾರಿನ ಟೈಯರ್‌ ಬ್ಲಾಸ್ಟ್‌ ಆಗಿ ರಸ್ತೆಬದಿ ನಿಂತಿದ್ದ ಲಾರಿಗೆ ಡಿಕ್ಕಿ; ಐವರು ಸ್ಥಳದಲ್ಲೇ ಸಾ*ವು

ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡು ಲಾರಿಗೆ ಡಿಕ್ಕಿಯಾದ ಪರಿಣಾಮ ಐವರು ಸಾವಿಗೀಡಾದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತುಮಕೂರ್ಲಹಳ್ಳಿ ಗೇಟ್ ಬಳಿ ನಡೆದಿದೆ.

ಚಳ್ಳಕೆರೆ ಮೂಲದ ಛಾಯಾಗ್ರಾಹಕ ರಾಘವೇಂದ್ರ, ರುದ್ರೇಶ್, ಸೋಮ, ಮಲ್ಲಿಕಾರ್ಜುನ, ಪ್ರಮೋದ್ ಮೃತ ದುರ್ದೈವಿಗಳು.

ಚಳ್ಳಕೆರೆಯಿಂದ ಬಳ್ಳಾರಿಗೆ ಕಾರಿನಲ್ಲಿ ಆಗಮಿಸುತ್ತಿದ್ದ ವೇಳೆ, ಅತಿಯಾದ ವೇಗದಿಂದಾಗಿ ಕಾರಿನ ಟೈಯರ್‌ ಸ್ಫೋಟಗೊಂಡು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

error: Content is protected !!