
ನವದೆಹಲಿ: ಏರ್ ಇಂಡಿಯಾ ,ಇಂಡಿಗೋ ವಿಮಾನ ಸಂಸ್ಥೆಯು ಜೂನ್‌ನಿಂದ ಆಗಸ್ಟ್ ವರೆಗೆ ಸುಮಾರು 250 ದೈನಂದಿನ ದೇಶೀಯ ವಿಮಾನಗಳ ಹಾರಾಟವನ್ನು ಕಡಿತಗೊಳಿಸಿದೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ
ಮಧ್ಯಪ್ರಾಚ್ಯದ ತೈಲ ಬಿಕ್ಕಟ್ಟಿನಿಂದಾಗಿ ಇಂಧನದ ದರ ದುಬಾರಿಯಗುತ್ತಿದ್ದು, ಇತ್ತ ಪ್ರಯಾಣಿಕರ ಸಂಖ್ಯೆ ಕೂಡ ಕುಸಿಯುತ್ತಿರುವುದರಿಂದ ಕಂಪನಿಗಳ ಮೇಲೆ ಹೊರೆ ಹೆಚ್ಚಾಗುತ್ತಿದೆ. ಇದರಿಂದ ಈಗಾಗಲೇ ವಿಮಾನಯಾನದ ಪ್ರಯಾಣದರ ಕೂಡ ಹೆಚ್ಚಾಗಿರುವ ಹಿನ್ನಲೆ ಈ ನಿರ್ಧಾರ ಕೈಗೊಳ್ಳಲಾಗಿದೆ.

ಬೇಸಿಗೆ ರಜೆ, ಪಾರ್ಟಿ ಹಾಗೂ ಇನ್ನಿತರ ಕಾರಣಗಳಿಗಾಗಿ ವಿಮಾನ ಪ್ರಯಾಣ ಕೈಗೊಳ್ಳುವ ಹೊತ್ತಿನಲ್ಲೇ ಈ ತೀರ್ಮಾನ ಕೈಗೊಂಡಿರುವುದು ಪ್ರವಾಸೋದ್ಯಮಕ್ಕೂ ಹೊಡೆತ ನೀಡಿದಂತಾಗಿದೆ.
ಇಂಡಿಗೋ ಸಂಸ್ಥೆಯಿಂದ ದಿನಕ್ಕೆ ಸುಮಾರು 2,200 ವಿಮಾನಗಳು ಹಾರಾಟ ನಡೆಸುತ್ತಿದ್ದವು. ಇದೀಗ ಇಂಡಿಗೋ ಸಂಸ್ಥೆ ಶೇ.5-7 ರಷ್ಟು ಕಡಿತಗೊಳಿಸಲು ಮುಂದಾಗಿದೆ. ಇದರ ಪರಿಣಾಮವಾಗಿ ದಿನಕ್ಕೆ 110 ವಿಮಾನಗಳು ಕಡಿಮೆಯಾಗಿವೆ.

ಕಳೆದ ಜೂನ್ ಮತ್ತು ಜುಲೈ ತಿಂಗಳಲ್ಲಿ ಏರ್ ಇಂಡಿಯಾ ತನ್ನ ದೇಶೀಯ ವಿಮಾನ ಸಂಚಾರ ವೇಳಾಪಟ್ಟಿಯಲ್ಲಿ ಶೇ.22 ರಷ್ಟು ಕಡಿತಗೊಳಿಸಿದೆ. ಈ ಮೂಲಕ ಪ್ರತಿದಿನ ಸುಮಾರು 110 ವಿಮಾನಗಳ ಹಾರಾಟ ಕಡಿತಗೊಳಿಸಿದಂತಾಗುತ್ತದೆ. ಈ ಹಿಂದೆ ಈ ಸಂಸ್ಥೆಯಿಂದ 500 ವಿಮಾನಗಳು ದೇಶದಲ್ಲಿ ಹಾರಾಟ ನಡೆಸುತ್ತಿದ್ದವು.
ಇತ್ತೀಚಿಗೆ ಹಲವು ಮಾರ್ಗಗಳ ವಿಮಾನ ಪ್ರಯಾಣ ದರದಲ್ಲಿ ಶೇ.30 ರಷ್ಟು ಹೆಚ್ಚಾಗಿದೆ. ಎಟಿಎಫ್ ವೆಚ್ಚ ಹೆಚ್ಚಾದ ಕಾರಣ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರಿಗೆ 400-450 ರೂ. ರಷ್ಟು ಇಂಧನ ಸರ್‌ಚಾರ್ಜ್‌ಗಳನ್ನು ಹಾಕಿವೆ. ಇದೀಗ ಮತ್ತೆ ಪ್ರಯಾಣದ ದರ ಏರಿಕೆಯಾಗುವ ಸಾಧ್ಯತೆ ಇದೆ.