ಸಿಎನ್‌ಜಿ ದರದಲ್ಲಿ ಮತ್ತೆ 2 ರೂ. ಹೆಚ್ಚಳ; ಇದೀಗ ಪ್ರತಿ ಕೆಜಿಗೆ 86 ರೂ.

ಮುಂಬೈ: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯ ಬಳಿಕ ಇದೀಗ ಸಿಎನ್‌ಜಿ ದರ ಮತ್ತೆ ಪ್ರತಿ ಕೆಜಿಗೆ 2 ರೂ.ಗಳಷ್ಟು ಹೆಚ್ಚಳ ಮಾಡಲಾಗಿದೆ. ಸರ್ಕಾರಿ ಅನಿಲ ವಿತರಕ ಮಹಾನಗರ ಗ್ಯಾಸ್ ಲಿಮಿಟೆಡ್ ಸಂಸ್ಥೆಯು ಮುಂಬೈನಲ್ಲಿ ಹೊಸ ದರ ಘೋಷಿಸಿದೆ.

ಪರಿಷ್ಕೃತ ದರದಲ್ಲಿ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ 2 ರೂ. ಹೆಚ್ಚಿಸಲಾಗಿದ್ದು, 86 ರೂ.ಗಳಿಗೆ ಏರಿಕೆಯಾಗಿದೆ. ಇನ್ನೂ ಗೃಹ ಬಳಕೆಯ ಪಿಎನ್‌ಜಿ ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್‌ಗೆ 50 ಪೈಸೆ ಹೆಚ್ಚಿಸಲಾಗಿದ್ದು, ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬರಲಿದೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಮೇ 26 ರಂದು ದೆಹಲಿಯಲ್ಲೂ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ 2 ರೂ. ಹೆಚ್ಚಳ ಮಾಡಲಾಗಿತ್ತು. ಇದಕ್ಕೂ ಮುನ್ನ ಮುಂಬೈ ವ್ಯಾಪ್ತಿಯಲ್ಲಿ ಮೇ 14 ರಂದು 2 ರೂ. ಹೆಚ್ಚಳ ಮಾಡಲಾಗಿತ್ತು. ಸದ್ಯ ಈಗಿನ ಪರಿಷ್ಕೃತ ದರವು ಮುಂಬೈ, ಥಾಣೆ, ನವಿ ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದ (ಎಂಎಂಆರ್) ಇತರ ಭಾಗಗಳಿಗೆ ಅನ್ವಯವಾಗಲಿದೆ.

error: Content is protected !!