
ಪರ್ಭಾನಿ: ಪರ್ಭಾನಿಯಿಂದ ಪುಣೆಗೆ ಹೋಗುತ್ತಿದ್ದ ಖಾಸಗಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ನಾಲ್ವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯ ಮನ್ವತ್ ಪಟ್ಟಣದ ಬಳಿ ಶುಕ್ರವಾರ(ಮೇ 29) ರಾತ್ರಿ ನಡೆದಿದೆ.


ಖಾಸಗಿ ಬಸ್ ಪುಣೆ ಕಡೆಗೆ ಪ್ರಯಾಣಿಸುತ್ತಿದ್ದಾಗ, ಎದುರುಗಡೆಯಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ನಾಲ್ವರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೋಟಾರ್ ಸೈಕಲ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಡಿಕ್ಕಿ ಶಬ್ದ ಕೇಳಿದ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿದ್ದಾರೆ.