
ಕಾರವಾರ: ಬಳ್ಳಾರಿಯಿಂದ ಗೋವಾ ಕಡೆಗೆ ಸಾಗುತ್ತಿದ್ದ ಸೀಬರ್ಡ್ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 52ರ ಕಂಚಿನಬಾಗಿಲು (ಅಡ್ಲೂರು) ಬಳಿ ರಸ್ತೆಗೆ ಅಡ್ಡಲಾಗಿ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್ಸಿನಲ್ಲಿದ್ದ ಒಟ್ಟು 36 ಪ್ರಯಾಣಿಕರ ಪೈಕಿ 21 ಜನರು ತೀವ್ರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಇಂದು(ಮೇ 30) ಬೆಳಗಿನ ಜಾವ ಸಂಭವಿಸಿದೆ. ಗಾಯಾಳುಗಳ ಪೈಕಿ 9 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ವೇಗವಾಗಿ ಬಂದ ಬಸ್ ಹೆದ್ದಾರಿಯ ಮಧ್ಯದಲ್ಲೇ ಉರುಳಿಬಿದ್ದ ಪರಿಣಾಮ, ಹೆದ್ದಾರಿಯ ಎರಡೂ ಬದಿಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತು ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ನಿದ್ರೆಯಿಂದ ತೂಕಡಿಸಿದ ಕಾರಣ ಚಾಲಕನಿಗೆ ನಿಯಂತ್ರಣ ತಪ್ಪಿರಬಹುದು ಎಂದು ಶಂಕಿಸಲಾಗಿದೆ. ಬಸ್ಸಿನ ಕಿಟಕಿ ಗಾಜುಗಳನ್ನು ಒಡೆದು ಒಳಗಿದ್ದ ಪ್ರಯಾಣಿಕರನ್ನು ಹೊರತರಲಾಯಿತು.


ಘಟನಾ ಸ್ಥಳಕ್ಕೆ ಅಂಕೋಲಾ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ತಕ್ಷಣವೇ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿತು. 21 ಮಂದಿ ಗಾಯಾಳುಗಳನ್ನು ತಕ್ಷಣವೇ ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ. ಅವರಲ್ಲಿ ತಲೆ ಮತ್ತು ಎದೆಗೆ ಬಲವಾದ ಪೆಟ್ಟು ಬಿದ್ದು ಪರಿಸ್ಥಿತಿ ಗಂಭೀರವಾಗಿದ್ದ 9 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರದ ಕ್ರಿಮ್ಸ್ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.