ಕಾವೂರು: 20 ಲಕ್ಷ ರೂ. ಅನುದಾನದ ನೂತನ ಅಂಗನವಾಡಿ ಕಟ್ಟಡಕ್ಕೆ ಶಾಸಕ ಡಾ. ವೈ. ಭರತ್ ಶೆಟ್ಟಿ ಶಿಲಾನ್ಯಾಸ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾವೂರು 15ನೇ ವಾರ್ಡ್‌ನಲ್ಲಿ 2025-26ನೇ ಸಾಲಿನ ನಗರ ಯೋಜನೆಯಡಿ ಮಂಜೂರಾದ 20 ಲಕ್ಷ ರೂಪಾಯಿ ಅನುದಾನದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಅಂಗನವಾಡಿ ಕಟ್ಟಡಕ್ಕೆ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಶನಿವಾರ ಅಧಿಕೃತವಾಗಿ ಶಿಲಾನ್ಯಾಸ ನೆರವೇರಿಸಿದರು.

ಕ್ಷೇತ್ರದ ಮಕ್ಕಳ ಶೈಕ್ಷಣಿಕ ಹಾಗೂ ಪೌಷ್ಟಿಕಾಂಶದ ಅಗತ್ಯತೆಗಳನ್ನು ಪೂರೈಸುವ ನಿಟ್ಟಿನಲ್ಲಿ ಮೂಲಸೌಕರ್ಯ ವೃದ್ಧಿಗೆ ಈ ಯೋಜನೆ ಹಮ್ಮಿಕೊಳ್ಳಲಾಗಿದ್ದು, ಶಾಸಕರು ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

.

 

ಈ ಶುಭ ಸಂದರ್ಭದಲ್ಲಿ ಮಕ್ಕಳ ಅಭಿವೃದ್ಧಿ ಯೋಜನಾ ಅಧಿಕಾರಿ ಶ್ರೀಮತಿ ಶ್ವೇತಾ ಎನ್., ಮೇಲ್ವಿಚಾರಕಿ ಅನುಪಮಾ ಕೆ. ಎಸ್., ವಾರ್ಡ್‌ನ ನಿಕಟಪೂರ್ವ ಕಾರ್ಪೊರೇಟರ್ ಸುಮಂಗಲ ರಾವ್, ಅಂಗನವಾಡಿ ಕಾರ್ಯಕರ್ತೆ ಪೂಜಾ ಹಾಗೂ ಸ್ಥಳೀಯ ಶಾಲೆಯ ಮುಖ್ಯೋಪಾಧ್ಯಾಯರಾದ ಜಯಂತಿ ಅವರು ಉಪಸ್ಥಿತರಿದ್ದರು.

ಇವರೊಂದಿಗೆ ಯುವ ಮೋರ್ಚಾ ಅಧ್ಯಕ್ಷರಾದ ಅಜಿತ್ ಶೆಟ್ಟಿ ಸೇರಿದಂತೆ ಸ್ಥಳೀಯ ಪ್ರಮುಖರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾವೂರು ವಾರ್ಡ್‌ನ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

error: Content is protected !!