
ಹೊಸದಿಲ್ಲಿ: ದೇಶದ ಎಲ್ಲಾ ಹೈಕೋರ್ಟ್‌ಗಳಿಗೆ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಂಡ ದಿನ ಅಥವಾ ಗರಿಷ್ಠ 24 ಗಂಟೆಯೊಳಗೆ ಇತ್ಯರ್ಥಪಡಿಸಬೇಕೆಂದು ಸುಪ್ರೀಂ ಕೋರ್ಟ್ ಶುಕ್ರವಾರ(ಮೇ 29) ಮಹತ್ವದ ಆದೇಶವನ್ನು ಹೊರಡಿಸಿದೆ.


“ವಿಚಾರಣೆ ಪೂರ್ಣಗೊಂಡು ಆದೇಶ ಕಾಯ್ದಿರಿಸಿದ ಬಳಿಕ ಮೂರು ತಿಂಗಳೊಳಗೆ ತೀರ್ಪು ಪ್ರಕಟಿಸಬೇಕು” ಎಂದು ಸೂಚಿಸಿರುವ ಸುಪ್ರೀಂ ಕೋರ್ಟ್, ಈ ನಿರ್ದೇಶನಗಳನ್ನು ದೇಶದ ಎಲ್ಲಾ ಹೈಕೋರ್ಟ್‌ಗಳು ಕಡ್ಡಾಯವಾಗಿ ಪಾಲಿಸಬೇಕೆಂದು ಸೂಚಿಸಿದೆ.
ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ನ್ಯಾಯಾಂಗ ಪ್ರಕ್ರಿಯೆಯಲ್ಲಿನ ವಿಳಂಬಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಈ ಮಹತ್ವದ ನಿರ್ದೇಶನವನ್ನು ನೀಡಿದೆ.