ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯ ಮೇಲೆ ಲೋಕಾಯುಕ್ತ ದಾಳಿ: 200 ದಾಖಲೆಗಳು ವಶಕ್ಕೆ

ಉಡುಪಿ: ಸಾರ್ವಜನಿಕರಿಂದ ದೂರುಗಳ ಆಧಾರದ ಮೇಲೆ ಉಡುಪಿ ಲೋಕಾಯುಕ್ತ ಪೊಲೀಸರು ರ್ನಾಟಕ ಲೋಕಾಯುಕ್ತ ಬೆಂಗಳೂರು ಕಚೇರಿಯಿಂದ ಶೋಧನಾ ವಾರಂಟ್ ಪಡೆದು ಶುಕ್ರವಾರ(ಮೇ 29) ಆದಿ ಉಡುಪಿಯಲ್ಲಿರುವ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯ ವಿವಿಧ ಶಾಖೆಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಮಂಗಳೂರು ಲೋಕಾಯುಕ್ತ ಎಸ್ಪಿ ದಿನೇಶ್‌ಕುಮಾರ್ ಮಾರ್ಗದರ್ಶನದಲ್ಲಿ, ಉಡುಪಿ ಲೋಕಾಯುಕ್ತ ಡಿವೈಎಸ್ಪಿ ಹಾಲಮೂರ್ತಿ ರಾವ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ರಾಜೇಂದ್ರ ನಾಯ್ಕ್ ಹಾಗೂ ಮಂಗಳೂರು ಲೋಕಾಯುಕ್ತ ಇನ್‌ಸ್ಪೆಕ್ಟರ್ ಭಾರತಿ ಸೇರಿದಂತೆ ಸಿಬ್ಬಂದಿಗಳು ಭಾಗವಹಿಸಿದ್ದರು.

ದಾಳಿಯ ವೇಳೆ ವಿಲೇವಾರಿಗೆ ಬಾಕಿಯಿದ್ದ ಹಲವಾರು ಕಡತಗಳು ಪತ್ತೆಯಾಗಿದ್ದು, ಕಾನೂನು ಬಾಹಿರವಾಗಿ ವಿಲೇವಾರಿ ಮಾಡಿದ ಕಡತಗಳು ಸೇರಿದಂತೆ ಸುಮಾರು 200 ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಕುರಿತು ಬೆಂಗಳೂರು ಲೋಕಾಯುಕ್ತರಿಗೆ ವಿವರವಾದ ವರದಿ ಸಲ್ಲಿಸಲಾಗುವುದು ಎಂದು ಡಿವೈಎಸ್ಪಿ ಅವರು ತಿಳಿಸಿದ್ದಾರೆ.

error: Content is protected !!