
ನವದೆಹಲಿ: ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ(LPG) ಸಿಲಿಂಡರ್‌ಗಳ ಬೆಲೆಯನ್ನು ಜೂನ್ 1 ರಿಂದ ಜಾರಿಗೆ ಬರುವಂತೆ ಹೆಚ್ಚಿಸಲಾಗಿದೆ ಎಂದು ತೈಲ ಮಾರುಕಟ್ಟೆ ಕಂಪನಿಗಳ ಮೂಲಗಳು ತಿಳಿಸಿವೆ.
ಇದರಿಂದಾಗಿ ಹೋಟೆಲ್, ರೆಸ್ಟೋರೆಂಟ್‌ಗಳು ಹಾಗೂ ಸಣ್ಣ ಕೈಗಾರಿಕೆಗಳ ಉತ್ಪಾದನಾ ವೆಚ್ಚ ಹೆಚ್ಚಾಗಲಿದ್ದು, ಜನಸಾಮಾನ್ಯರ ಜೇಬಿಗೆ ಮತ್ತಷ್ಟು ಕತ್ತರಿ ಬೀಳುವ ಸಾಧ್ಯತೆಯಿದೆ. ಆದರೆ, ಸಾರ್ವಜನಿಕರಿಗೆ ನಿರಾಳ ತರುವಂತೆ ಗೃಹಬಳಕೆಯ ಅಡುಗೆ ಅನಿಲದ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ರಾಜಧಾನಿ ದೆಹಲಿಯಲ್ಲಿ 19 ಕೆಜಿಯ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 42 ರೂಪಾಯಿ ಹೆಚ್ಚಳವಾಗಿದ್ದು, ಹೊಸ ದರ 3,113.50 ರೂಪಾಯಿ ತಲುಪಿದೆ. ಕೋಲ್ಕತಾದಲ್ಲಿ ಗರಿಷ್ಠ 53.50 ರೂಪಾಯಿ ಏರಿಕೆಯಾಗಿದ್ದು, ಸಿಲಿಂಡರ್ ಬೆಲೆ 3,255.50 ರೂಪಾಯಿಗೆ ಮುಟ್ಟಿದೆ.
ಪ್ರವಾಸಿಗರು ಮತ್ತು ವಿದ್ಯಾರ್ಥಿಗಳು ಹೆಚ್ಚಾಗಿ ಬಳಸುವ 5 ಕೆಜಿ ತೂಕದ ಮುಕ್ತ ಮಾರುಕಟ್ಟೆ (FTL) ಸಿಲಿಂಡರ್‌ಗಳ ಬೆಲೆಯನ್ನೂ ಸಹ 11 ರೂಪಾಯಿ ಹೆಚ್ಚಿಸಲಾಗಿದೆ. ಈ ಪರಿಷ್ಕರಣೆಯ ನಂತರ ದೆಹಲಿಯಲ್ಲಿ 5 ಕೆಜಿ ಎಫ್‌ಟಿಎಲ್ ಸಿಲಿಂಡರ್ ಬೆಲೆ 821.50 ರೂಪಾಯಿ ಆಗಲಿದೆ.

ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ನಿರಂತರ ಏರಿಳಿತಗಳಿದ್ದರೂ, ಗೃಹಬಳಕೆಯ (14.2 ಕೆಜಿ) ಸಿಲಿಂಡರ್ ಬೆಲೆ ಯಥಾಸ್ಥಿತಿಯಲ್ಲಿದೆ.
ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ
ದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಕೊರತೆಯಾಗದಂತೆ ತಡೆಯಲು ಮತ್ತು ಇಂಧನ ಭದ್ರತೆಯನ್ನು ಬಲಪಡಿಸಲು ಸರ್ಕಾರ ಮತ್ತು ತೈಲ ಕಂಪನಿಗಳು ಜಂಟಿಯಾಗಿ ಶ್ರಮಿಸುತ್ತಿವೆ ಎಂದು ಪೆಟ್ರೋಲಿಯಂ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ತಿಳಿಸಿದ್ದಾರೆ.

ದೇಶದಲ್ಲಿ ಸದ್ಯಕ್ಕೆ ಪೆಟ್ರೋಲ್, ಡೀಸೆಲ್ ಅಥವಾ ಎಲ್‌ಪಿಜಿ ಕೊರತೆ ಇಲ್ಲ, ಅಗತ್ಯ ದಾಸ್ತಾನು ಲಭ್ಯವಿದೆ. ಭವಿಷ್ಯದ ಸುರಕ್ಷತೆಯ ದೃಷ್ಟಿಯಿಂದ ಕನಿಷ್ಠ 30 ದಿನಗಳ ಬಳಕೆಗೆ ಆಗುವಷ್ಟು ಎಲ್‌ಪಿಜಿ ಸಂಗ್ರಹವನ್ನು ಕಾಯ್ದುಕೊಳ್ಳುವಂತೆ ತೈಲ ಮಾರಾಟ ಕಂಪನಿಗಳಿಗೆ ಸೂಚಿಸಲಾಗಿದೆ.
