
ಮಂಗಳೂರು: ಮಳೆಗಾಲವು ಮೀನುಗಳ ಸಂತಾನೋತ್ಪತ್ತಿಯ ಕಾಲವಾಗಿದ್ದು, ಅವುಗಳ ರಕ್ಷಣೆಗಾಗಿ ಮೀನುಗಾರಿಕೆ ಚಟುವಟಿಕೆಗಳು ಇಂದಿನಿಂದ 61 ದಿನಗಳ ಕಾಲ ಯಾಂತ್ರೀಕೃತ ಬೋಟ್‌ಗಳು ಸಮುದ್ರಕ್ಕೆ ಇಳಿಯದಂತೆ ನಿರ್ಬಂಧಿಸಲಾಗಿದೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ
ಹೆಚ್ಚಿನ ಕಡಲ ಪ್ರಭೇದಗಳು ಮೊಟ್ಟೆಯಿಡುತ್ತವೆ. ಹೀಗಾಗಿ ಮುಂಗಾರು ತಿಂಗಳುಗಳಲ್ಲಿ ಮೀನುಗಳನ್ನು ರಕ್ಷಿಸುವ ಉದ್ದೇಶದಿಂದ ಈ ಅವಧಿಯಲ್ಲಿ ಯಾಂತ್ರೀಕೃತ ದೋಣಿಗಳ ಕಾರ್ಯಾಚರಣೆಯು ಮೀನಿನ ಸಂತಾನೋತ್ಪತ್ತಿಗೆ ಅಡ್ಡಿಪಡಿಸಬಹುದು ಮತ್ತು ಭವಿಷ್ಯದ ಮೀನುಗಾರಿಕೆಯ ಮೇಲೆ ಭಾರಿ ಹೊಡೆತ ನೀಡಬಹುದೆಂದು ರಾಜ್ಯ ಸರ್ಕಾರದ ಆದೇಶದ ಮೇರೆಗೆ ಈ ನಿಷೇಧವನ್ನು ಹೇರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಅವಧಿಯಲ್ಲಿ ಯಾಂತ್ರಿಕ ದೋಣಿಗಳು ಸಮುದ್ರಕ್ಕೆ ಇಳಿದರೆ ಮೀನುಗಳ ಸಂತಾನೋತ್ಪತ್ತಿಗೆ ತೊಂದರೆಯಾಗಲಿದೆ. ಈ ಹಿನ್ನೆಲೆ ದ.ಕ. ಜಿಲ್ಲೆಯಲ್ಲಿ 61 ದಿನಗಳ ಕಾಲ ನಿಷೇಧ ಹೇರಲಾಗಿದೆ. ಈ ಅವಧಿಯಲ್ಲಿ ಮಂಗಳೂರು ಮೀನುಗಾರಿಕಾ ಬಂದರಿನಲ್ಲಿ ಹೆಚ್ಚಿನ ಮೀನುಗಾರಿಕೆ ಸಂಬಂಧಿತ ಚಟುವಟಿಕೆಗಳು ಮುಂದಿನ ಎರಡು ತಿಂಗಳ ಕಾಲ ಸ್ಥಗಿತಗೊಳ್ಳುವ ನಿರೀಕ್ಷೆಯಿದೆ.


ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧವಿದ್ದರೂ ಸಾಂಪ್ರದಾಯಿಕ ನಾಡದೋಣಿಗಳಿಗೆ ಮೀನುಗಾರಿಕೆ ಮುಂದುವರಿಸಲು ಅನುಮತಿ ನೀಡಲಾಗಿದೆ. ನಾಡದೋಣಿ ಮತ್ತು ಬಲೆಗಳನ್ನು ಬಳಸುವ ಮೀನುಗಾರರು 10 ಅಶ್ವಶಕ್ತಿಯ ಇಂಜಿನ್ ಬಳಸಿ ಸಮುದ್ರದ ಬದಿ, ನದಿ ತೀರದಲ್ಲಿ ಮೀನುಗಾರಿಕೆ ನಡೆಸಬಹುದಾಗಿದೆ.