
ಕೌಲಾಲಂಪುರ್: 16 ವರ್ಷದೊಳಗಿನ ಮಕ್ಕಳು ಸೋಷಿಯಲ್ ಮೀಡಿಯಾ ಖಾತೆ ತೆರೆಯುವುದನ್ನು ಮಲೇಷ್ಯಾ ಸರ್ಕಾರ ನಿಷೇಧಿಸಿದೆ. ನಿಯಮ ಉಲ್ಲಂಘಿಸುವ ಕಂಪನಿಗಳಿಗೆ 1 ಕೋಟಿ ರಿಂಗಿಟ್(ಸುಮಾರು 23.95 ಕೋಟಿ ಭಾರತೀಯ ರೂಪಾಯಿಗಳು) ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧಿಸುವ ಮೂಲಕ ಮಕ್ಕಳ ಸೋಷಿಯಲ್ ಮೀಡಿಯಾ ವ್ಯಸನವನ್ನು ಕಡಿಮೆ ಮಾಡಲು ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ನಿಯಮಾನುಸಾರ 16 ವರ್ಷಕ್ಕಿಂತ ಕಡಿಮೆ ಇರುವ ಮಕ್ಕಳು ಫೇಸ್‌ಬುಕ್, ಇನ್‌ಸ್ಟಾಗ್ರಾಂ, ಟಿಕ್‌ಟಾಕ್ ಹಾಗೂ ಯೂಟ್ಯೂಬ್ ಸೇರಿದಂತೆ ಯಾವುದೇ ಸೋಶಿಯಲ್ ಮೀಡಿಯಾಗಳಲ್ಲಿ ಖಾತೆ ತೆರೆಯಲು ಅವಕಾಶವಿಲ್ಲ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ
ಸೋಶಿಯಲ್ ಮೀಡಿಯಾ ಕಂಪನಿಗಳು ಬಳಕೆದಾರರ ವಯಸ್ಸು ಪರಿಶೀಲಿಸುವ ವ್ಯವಸ್ಥೆ ಕಡ್ಡಾಯವಾಗಿ ಜಾರಿಗೆ ತರಬೇಕು. ಈ ನಿಯಮ ಉಲ್ಲಂಘಿಸುವ ಕಂಪನಿಗಳಿಗೆ 1 ಕೋಟಿ ರಿಂಗಿಟ್ ವರೆಗೆ ದಂಡ ವಿಧಿಸಲಾಗುತ್ತದೆ ಎಂದು ಸರ್ಕಾರ ಎಚ್ಚರಿಸಿದೆ.

ಮಕ್ಕಳನ್ನು ಹಾನಿಕಾರಕ ವಿಷಯಗಳು, ಸೈಬರ್ ಬುಲ್ಲಿಂಗ್ ಹಾಗೂ ಅತಿಯಾದ ಸೋಶಿಯಲ್ ಮೀಡಿಯಾ ಬಳಕೆಯಿಂದ ರಕ್ಷಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ, ಈ ನಿಯಮ ಮಕ್ಕಳಿಗೆ ಇಂಟರ್‌ನೆಟ್ ಅಥವಾ ಡಿಜಿಟಲ್ ತಂತ್ರಜ್ಞಾನ ಬಳಕೆಯನ್ನು ತಡೆಯುವುದಿಲ್ಲ ಎಂದು ಮಲೇಷ್ಯಾ ತಿಳಿಸಿದೆ.