ಸರಕಾರಿ ಶಾಲೆಯ ಪ್ರಾರಂಭೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರದ ಸಂದೇಶ ನೀಡಿದ ಮಂದಾರ ಕಾಳೆ

ಮಂಗಳೂರು: ಪ್ರಾಥಮಿಕ ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯದ ಬದುಕಿಗೆ ಅತ್ಯಂತ ನಿರ್ಣಾಯಕವಾದ ಘಟ್ಟವಾಗಿದೆ ಎಂದು ಎಂ.ಆರ್.ಪಿ.ಎಲ್ ಸಂಸ್ಥೆಯ ಸಿ.ಎಸ್.ಅರ್ ವಿಭಾಗದ ಜನರಲ್ ಮ್ಯಾನೇಜರ್ ಮಂದಾರ ಕಾಳೆ ನುಡಿದರು. ಅವರು ಮಧ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಗೆ ಸೀಮಿತವಾಗದೆ, ಉತ್ತಮ ಸಂಸ್ಕಾರ ಮತ್ತು ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರಲ್ಲದೆ ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಯು ಎಲ್ಲಾ ಮೂಲಭೂತ ಸೌಕರ್ಯಗಳನ್ನು ಹೊಂದಿ ಈ ಮಟ್ಟದಲ್ಲಿ ಬೆಳೆದಿರುವುದು ಶ್ಲಾಘನೀಯ ಮುಂದಿನ ಶಾಲೆಯ ಬೆಳವಣಿಗೆಗೆ ನಮ್ಮ ಸಂಸ್ಥೆಯ ಸದಾ ಸಹಕಾರವಿದೆ ಎಂದರು.

ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಸಮಗ್ರ ಶಿಕ್ಷಣ ಕರ್ನಾಟಕ ಸಹಾಯಕ ಯೋಜನಾ ಸಮನ್ವಯ ಅಧಿಕಾರಿ ವಿದ್ಯಾ ಶೆಟ್ಟಿಯವರು ಮಾತನಾಡಿ, ಸರಕಾರಿ ಶಾಲೆಯು ಖಾಸಗಿ ಶಾಲೆಯನ್ನು ಮೀರಿಸುವ ರೀತಿ ಬೆಳೆದಿರುವುದು ಇತರ ಶಾಲೆಗೆ ಮಾದರಿಯಾಗಿದೆ. ಸರಕಾರಿ ಶಾಲೆಯಲ್ಲಿ ಬಹಳಷ್ಟು ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಗುಣಮಟ್ಟದ ಶಿಕ್ಷಣ ಒದಗಿಸಲಾಗುವುದರಿಂದ ವಿದ್ಯಾರ್ಥಿಗಳನ್ನು ಹೆಚ್ಚು ಸರಕಾರಿ ಶಾಲೆಗೆ ಸೇರಿಸಿ ಎಂದು ಪೋಷಕರಲ್ಲಿ ಮನವಿ ಮಾಡಿದರು.

ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಉಪಾಧ್ಯಕ್ಷ ಕೃಷ್ಣಮೂರ್ತಿ ಭಟ್, ಕೋಶಾಧಿಕಾರಿ ವಿಠಲ ಶೆಟ್ಟಿ, ಸದಸ್ಯರಾದ ವಜ್ರಾಕ್ಷಿ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷ ಅನಿಲ್ ಸಾಲ್ಯಾನ್ ಮುಂತಾದವರು ಉಪಸ್ಥಿತರಿದ್ದರು.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಪ್ರಪುಲ್ಲ ಪಂಜ ವಹಿಸಿದರು ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಷರಾಜ್ ಶೆಟ್ಟಿ ಸ್ವಾಗತಿಸಿ, ಶಾಲಾ ಮುಖ್ಯ ಶಿಕ್ಷಕಿ ಜೇನ್ ಡಿಸೋಜಾ ಧನ್ಯವಾದ ಸಮರ್ಪಿಸಿ ಶಿಕ್ಷಕಿ ಶೈಲಾ ಕಾರ್ಯಕ್ರಮ ನಿರೂಪಿಸಿದರು.

ಇದೇ ಸಂದರ್ಭದಲ್ಲಿ ಮಕ್ಕಳಿಂದ ಶಾಲಾ ಮುಖ್ಯ ರಸ್ತೆಯಲ್ಲಿ ಸರಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಎಂಬ ಶೀರ್ಷಿಕೆಯಡಿ ಜಾಥಾ ನಡೆಸಲಾಯಿತು. ಪ್ರಾಥಮಿಕ ಮತ್ತು ಪ್ರೌಢಶಾಲೆಯ ಎಲ್ಲಾ ವಿದ್ಯಾರ್ಥಿಗಳನ್ನು ಸ್ಮರಣಿಕೆ ಕೊಟ್ಟು ಸ್ವಾಗತಿಸಲಾಯಿತು. ಪ್ರಸಕ್ತ ಸಾಲಿನಲ್ಲಿ ಹೆಚ್ಚುವರಿ 90 ವಿದ್ಯಾರ್ಥಿಗಳು ಶಾಲೆಗೆ ಸೇರ್ಪಡೆಯಾಗಿದ್ದು ಅವರನ್ನು ಶಾಲೆಗೆ ಬರಮಾಡಿಕೊಳ್ಳಲಾಯಿತು.

error: Content is protected !!