ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ!!

ಉಡುಪಿ: ವೇಗವಾಗಿ ಬಂದ ಕಾರು ರಸ್ತೆ ಬದಿಯ ಕಲ್ಲು ಮತ್ತು ನಿಲ್ಲಿಸಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರ ಬಳಿಯ ಫಾರೆಸ್ಟ್ ಗೇಟ್ ಬಳಿ ಇಂದು(ಜೂ.1) ಬೆಳಿಗ್ಗೆ ನಡೆದಿದೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಉಡುಪಿಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಸ್ವಿಫ್ಟ್ ಕಾರು ಫಾರೆಸ್ಟ್ ಗೇಟ್ ಪ್ರದೇಶವನ್ನು ಸಮೀಪಿಸುತ್ತಿದ್ದಂತೆ, ಚಾಲಕನ ನಿಯಂತ್ರಣ ತಪ್ಪಿ, ಕಲ್ಲು ಮತ್ತು ಪಕ್ಕದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದು ನಂತರ ಮಗುಚಿ ಬಿದ್ದಿದೆ.

ಅಪಘಾತದಲ್ಲಿ ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟಪಾಡಿ ಹೊರಠಾಣೆ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಹೆದ್ದಾರಿ ಸಂಚಾರವನ್ನು ಸುಗಮಗೊಳಿಸಿದರು.

error: Content is protected !!