ಸೂರಿಂಜೆ ಶಾಲೆಯ ಎಸ್‌ಡಿಎಂಸಿ ನೂತನ ಅಧ್ಯಕ್ಷರಾಗಿ ಅನಿಲ್ ಸಾಲ್ಯಾನ್ ಸರ್ವಾನುಮತದಿಂದ ಆಯ್ಕೆ!

ಮಂಗಳೂರು: ಮಧ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿ (SDMC) ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಇತ್ತೀಚೆಗೆ ಜರುಗಿತು.

ಶಾಲೆಯ ನೂತನ ಅಧ್ಯಕ್ಷರಾಗಿ ಪ್ರಮುಖರಾದ ಅನಿಲ್ ಸಾಲ್ಯಾನ್ ಸೂರಿಂಜೆ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಅದೇ ರೀತಿ, ಸಮಿತಿಯ ನೂತನ ಉಪಾಧ್ಯಕ್ಷೆಯಾಗಿ ಶಶಿಕಲಾ ಪಕ್ಷಿಕೆರೆ ಅವರು ಒಮ್ಮತದಿಂದ ಚುನಾಯಿತರಾಗಿದ್ದಾರೆ.

ಶಾಲೆಯ ಅಭಿವೃದ್ಧಿ, ಮೂಲಸೌಕರ್ಯಗಳ ವೃದ್ಧಿ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾಗಿ ಮುಂಬರುವ ಅವಧಿಯಲ್ಲಿ ಈ ನೂತನ ಸಮಿತಿಯು ಕಾರ್ಯನಿರ್ವಹಿಸಲಿದೆ ಎಂದು ನೂತನ ಸಮಿತಿ ತಿಳಿಸಿದೆ. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ವೃಂದ, ಪೋಷಕರು ಹಾಗೂ ಸ್ಥಳೀಯ ಪ್ರಮುಖರು ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದ್ದಾರೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

.

 

error: Content is protected !!