
ಬೆಂಗಳೂರು: ಇಂದಿನಿಂದ 4 ರಾಜ್ಯಸಭೆ, 7 ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಎರಡೂ ಚುನಾವಣೆಗಳ ಅಧಿಸೂಚನೆ ಪ್ರಕಟವಾಗಿದೆ.

ಜೂ.8ರಂದು ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಜೂ.11ರಂದು ನಾಮಪತ್ರಗಳ ವಾಪಸಾತಿಗೆ ಕೊನೇ ದಿನವಾಗಿದೆ. ಇನ್ನು ಜೂ.18ರಂದು ಮತದಾನ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ.
ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಅಭ್ಯರ್ಥಿಗಳ ಆಯ್ಕೆಯನ್ನು ಕಾಂಗ್ರೆಸ್ ಮತ್ತು ಬಿಜೆಪಿ ಇನ್ನೂ ಫೈನಲ್ ಮಾಡಿಲ್ಲ. ಇನ್ನು 2, 3 ದಿನಗಳಲ್ಲಿ ಎರಡೂ ಪಕ್ಷಗಳಿಂದ ಅಭ್ಯರ್ಥಿಗಳ ಹೆಸರು ಫೈನಲ್ ಆಗುವ ಸಾಧ್ಯತೆ ಇದೆ. ರಾಜ್ಯಸಭೆಯ 4 ಸ್ಥಾನಗಳ ಪೈಕಿ ಕಾಂಗ್ರೆಸ್ 3, ಬಿಜೆಪಿ 1 ಗೆಲ್ಲಲು ಅವಕಾಶ ಇದೆ. ಪರಿಷತ್ ಸ್ಥಾನಗಳ ಪೈಕಿ ಕಾಂಗ್ರೆಸ್ 4, ಬಿಜೆಪಿ 2 ಸ್ಥಾನ ಸುಲಭ ಗೆಲುವು ಹಾಗೂ ಮತ್ತೊಂದು ಸ್ಥಾನಕ್ಕೂ ಕಾಂಗ್ರೆಸ್‌ನಿಂದಲೇ ಅಭ್ಯರ್ಥಿ ಕಣಕ್ಕೆ ಇಳಿಸಿ ಗೆಲ್ಲಿಸಿಕೊಳ್ಳಲು ಮುಂದಾಗಿದೆ.

ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬೆಳಗಾವಿ ಬಿಜೆಪಿ ಮುಖಂಡ ಈರಣ್ಣ ಕಡಾಡಿ, ದಕ್ಷಿಣ ಕನ್ನಡ ಬಿಜೆಪಿ ಮುಖಂಡ ಕೆ.ನಾರಾಯಣ ಅವರ ಅವಧಿ ಜೂನ್ 25ರಂದು ಕೊನೆಗೊಳ್ಳಲಿದೆ. ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಚುನಾಯಿತರಾಗಿರುವ ಜೆಡಿಎಸ್‌ನ ಗೋವಿಂದ ರಾಜು, ಕಾಂಗ್ರೆಸ್‌ನ ನಸೀರ್ ಅಹಮದ್, ತಿಪ್ಪಣ್ಣಪ್ಪ ಕಮಕನೂರ ಹಾಗೂ ಬಿಕೆ ಹರಿಪ್ರಸಾದ್, ಬಿಜೆಪಿಯ ಎಂ.ಟಿ.ಬಿ ನಾಗರಾಜು, ಪ್ರತಾಪ್ ಸಿಂಹ ನಾಯಕ್, ಸುನಿಲ್ ವಲ್ಯಾಪುರೆ ಅವರ ಅವಧಿಯು ಜೂನ್ 30ರಂದು ಕೊನೆಗೊಳ್ಳಲಿದೆ.