ಕಾರಿಗೆ ಲಾರಿ ಡಿಕ್ಕಿ; 5 ಮಂದಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಕಾರೊಂದಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 5 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿಯ ಕೂಟೇಲು ಎಂಬಲ್ಲಿ ಸೋಮವಾರ(ಜೂ. 1) ರಾತ್ರಿ ಸಂಭವಿಸಿದೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಕಾರಿನಲ್ಲಿದ್ದ ಚಾಲಕ ದೀಪಕ್ (45), ಯಾತ್ರಾರ್ಥಿಗಳಾಗಿದ್ದ ಗುರುರಾಜ್ (46), ಧನುಷ್ (15) , ಭಾರತಿ ( 48), ಗೀತಾ (55) ಗಾಯಾಳುಗಳು.

ಕಾರ್ಕಳದ ನಕ್ರೆ ಎಂಬಲ್ಲಿನ ಕುಟುಂಬವೊಂದರ ಸದಸ್ಯರು ಸುಬ್ರಹ್ಮಣ್ಯಕ್ಕೆ ವ್ಯಾಗನರ್ ಕಾರಿನಲ್ಲಿ ಯಾತ್ರೆ ಕೈಗೊಂಡಿದ್ದು, ಉಪ್ಪಿನಂಗಡಿಯ ಕೂಟೇಲು ಸಮೀಪ ಕಾರು ಸಂಚರಿಸುತ್ತಿದ್ದ ವೇಳೆ ಅಡುಗೆ ಅನಿಲದ ಜಾಡಿಗಳನ್ನು ಹೊತ್ತೊಯ್ಯುತ್ತಿದ್ದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲುಗೊಂಡಿದ್ದು, ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ. ಲಾರಿ ಚಾಲಕ ದಾಮೋದರ್ ಅಪಾಯವಿಲ್ಲದೆ ಪಾರಾಗಿದ್ದಾರೆ.

ಗಾಯಾಳುಗಳನ್ನು ನಜ್ಜುಗುಜ್ಜಾದ ಕಾರಿನಿಂದ ಹೊರಗೆಳೆದು ಆಸ್ಪತ್ರೆಗೆ ಸಾಗಿಸುವಲ್ಲಿ ಸ್ಥಳೀಯರು ಶ್ರಮಿಸಿದರು. ಪುತ್ತೂರು ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.‌

error: Content is protected !!