ನಾಳೆ ಬೆಂಗಳೂರಿನ ಈ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧ!!

ಬೆಂಗಳೂರು: ಡಿಕೆ ಶಿವಕುಮಾರ್‌ ಅವರು ನೂತನ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆ ಪೊಲೀಸ್ ಇಲಾಖೆ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿದೆ. ಜೂ 3ರಂದು ಮಧ್ಯಾಹ್ನ 12:00ರಿಂದ ರಾತ್ರಿ 8:00ರವರೆಗೆ ನಗರದ ಕೇಂದ್ರ ಭಾಗದಲ್ಲಿ ಸಂಚಾರ ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗಗಳ ವ್ಯವಸ್ಥೆ ಮಾಡಲಾಗಿದೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭವು ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆಯಲಿದ್ದು, ದೇಶ ಹಾಗೂ ವಿವಿಧ ರಾಜ್ಯಗಳ ಹಲವು ಗಣ್ಯರು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆ ಪೊಲೀಸ್ ಇಲಾಖೆ ಸಂಚಾರ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳನ್ನು ತಂದಿದೆ. ಕೆಲವೆಡೆ ಪಾರ್ಕಿಂಗ್‌ ಕೂಡ ನಿಷೇಧಿಸಲಾಗಿದೆ.

ನಿಷೇಧಿತ ಸಂಚಾರಿ ರಸ್ತೆಗಳು:
ಕಬ್ಬನ್ ರಸ್ತೆ (BRV ಜಂಕ್ಷನ್– CTO ಜಂಕ್ಷನ್ ಹಾಗೂ CTO ವೃತ್ತ– ಲೋಕಭವನ)
ಬಾಲೇಕುಂದ್ರಿ ಜಂಕ್ಷನ್‌ನಿಂದ ಡಾ. ಬಿ.ಆರ್. ಅಂಬೇಡ್ಕರ್ ರಸ್ತೆ ಕಡೆ
ಕೆ.ಆರ್. ವೃತ್ತದಿಂದ ಕಾಫಿ ಬೋರ್ಡ್ ಜಂಕ್ಷನ್ ಕಡೆ
ರೇಸ್ ಕೋರ್ಸ್ ರಸ್ತೆ (ಟ್ರೈಲೈಟ್ ಜಂಕ್ಷನ್–ಸುಬ್ಬಣ್ಣ ಜಂಕ್ಷನ್)
ಕ್ವೀನ್ಸ್ ಜಂಕ್ಷನ್‌ನಿಂದ CTO/ಲೋಕಭವನ ಕಡೆ
ಸೇಂಟ್ ಮಾರ್ಕ್ಸ್ ರಸ್ತೆಯಿಂದ ಕ್ವೀನ್ಸ್ ಜಂಕ್ಷನ್ ಮೂಲಕ CTO ಕಡೆ ಸಂಚಾರ ನಿರ್ಬಂಧ

ಪರ್ಯಾಯ ಮಾರ್ಗಗಳು:
ಸಂಚಾರ ದಟ್ಟಣೆ ತಪ್ಪಿಸಲು ಶಿವಾಜಿನಗರ, ಕನ್ನಿಂಗ್‌ ಹ್ಯಾಮ್ ರಸ್ತೆ, ನೃಪತುಂಗ ರಸ್ತೆ, ಶಿವಾನಂದ ವೃತ್ತ, ಔಟರ್ ರಿಂಗ್ ರಸ್ತೆ, ಹೆಬ್ಬಾಳ ಹಾಗೂ ಇತರೆ ಮಾರ್ಗಗಳನ್ನು ಬಳಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.

ನಿಷೇಧಿತ ಪಾರ್ಕಿಂಗ್ ಪ್ರದೇಶಗಳು:
ಡಾ. ಬಿ.ಆರ್. ಅಂಬೇಡ್ಕರ್ ರಸ್ತೆ, ಲೋಕಭವನ ರಸ್ತೆ, ಕ್ವೀನ್ಸ್ ರಸ್ತೆ, ಪ್ಯಾಲೇಸ್ ರಸ್ತೆ, ರೇಸ್ ಕೋರ್ಸ್ ರಸ್ತೆ, ಕಬ್ಬನ್ ರಸ್ತೆ ಸೇರಿದಂತೆ ಹಲವು ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಗೆ ನಿರ್ಬಂಧಿಸಲಾಗಿದೆ.

ನಾಳೆ ಮಧ್ಯಾಹ್ನ 12:00ರಿಂದ ರಾತ್ರಿ 10:00ರವರೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಭಾರಿ ವಾಹನಗಳ ಸಂಚಾರ ಸಂಪೂರ್ಣ ನಿಷೇಧಿಸಲಾಗಿದ್ದು, ಸಾರ್ವಜನಿಕರು ನಿರ್ಬಂಧಿತ ರಸ್ತೆಗಳನ್ನು ತಪ್ಪಿಸಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಬೆಂಗಳೂರು ಸಂಚಾರಿ ಪೊಲೀಸರು ಸೂಚಿಸಿದ್ದಾರೆ.

error: Content is protected !!