ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿ ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನಿಸಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರು ಡಾ.ಜಿ ಪರಮೇಶ್ವರ್ ಅವರ ಸದಾಶಿವ ನಗರದ ನಿವಾಸಕ್ಕೆ ಇಂದು(ಜೂ.3) ಬೆಳಗ್ಗೆ ಭೇಟಿ ನೀಡಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಸಮಾರಂಭಕ್ಕೆ ಆಹ್ವಾನಿಸಿದರು.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ವೇಳೆ 10ರಿಂದ 14 ಮಂದಿ ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ ಎನ್ನಲಾಗಿದೆ.

error: Content is protected !!