
ಹೊಸದಿಲ್ಲಿ: ಹೊಟೇಲ್‌ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, ವಿದೇಶಿಯರು ಸೇರಿ 21 ಮಂದಿ ಸಾವನ್ನಪ್ಪಿರುವ ಘಟನೆ ದಕ್ಷಿಣ ದಿಲ್ಲಿಯ ಮಾಳವೀಯಾ ನಗರದಲ್ಲಿ ಇಂದು(ಜೂ.3) ಬೆಳಿಗ್ಗೆ ನಡೆದಿದೆ.

ಅಗ್ನಿ ಅವಘಡದಿಂದ ಹೊಟೇಲ್‌ನಲ್ಲಿ ಹೊಗೆ ಆವರಿಸಿಕೊಂಡಿದ್ದು, ಕಟ್ಟಡದಿಂದ ಹೊರಬರಲು ಜನರು ಪರದಾಡುತ್ತಿದ್ದುರು. ಅಗ್ನಿಶಾಮಕ ದಳದವರು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದು, ಬೆಂಕಿ ಅವಘಡದಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಕೆಲವರು ವಿದೇಶಿಯರಾಗಿದ್ದು, ಮಧ್ಯ ಏಷ್ಯಾ ಮತ್ತು ಆಫ್ರಿಕಾದವರು ಎನ್ನಲಾಗಿದೆ. ಜೊತೆಗೆ 37 ಜನರನ್ನು ಈಗಾಗಲೇ ರಕ್ಷಿಸಲಾಗಿದೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.

ಪ್ರಧಾನಿ ಮೋದಿ ಮೃತ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಗಾಯಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಅಗ್ನಿ ಅವಘಡದಲ್ಲಿ ಗಾಯಗೊಂಡವರನ್ನು ಮ್ಯಾಕ್ಸ್ ಆಸ್ಪತ್ರೆಗೆ ಮತ್ತು AIIMS ಆಸ್ಪತ್ರೆಗೆ ದಾಖಲಿಸಲಾಗಿದೆ.
