
ಮಂಗಳೂರು: ಪ್ರತಿಭಾವಂತ ಬಾಲಕಿಯೊಬ್ಬಳು ರಸ್ತೆ ಅಪಘಾತದಲ್ಲಿ ದಾರುಣ ಮೃತಪಟ್ಟ ಘಟನೆ ಬುಧವಾರ ರಾತ್ರಿ ಬಂಟ್ವಾಳ ಠಾಣಾ ವ್ಯಾಪ್ತಿಯ ಮಾಣಿ ಸೂರಿಕುಮೇರು ಎಂಬಲ್ಲಿ ನಡೆದಿದೆ.
ಬಾಳ್ತಿಲ ಗ್ರಾಮದ ಹೇಮಂತ್ ಕುಮಾರ್ ಎಂಬವರ ಪುತ್ರಿ ನೈರುತಿ ಎಂ. ಸುವರ್ಣ ಮೃತಪಟ್ಟ ಬಾಲಕಿ.
ನೆಟ್ಲ ಸದಾಶಿವ ದೇವಸ್ಥಾನದಲ್ಲಿ ಪೂಜೆ ಮುಗಿಸಿ ಹೇಮಂತ್ ಎಂಬವರು ತಮ್ಮ ಪತ್ನಿ ಮತ್ತು ಮಕ್ಕಳಾದ ನೈರುತಿ ಮತ್ತು ಆಕೆಯ ತಂಗಿಯೊಂದಿಗೆ ಮನೆಗೆ ತೆರಳುತ್ತಿದ್ದ ವೇಳೆ ಬೈಕ್‌ಗೆ ಸ್ಕೂಟರ್ ಡಿಕ್ಕಿ ಹೊಡೆದಿದೆ. ಈ ವೇಳೆ ಕಾಂಕ್ರೀಟ್ ರಸ್ತೆಗೆ ನೈರಿತಿ ಬಿದ್ದಿದ್ದು ತಲೆಗೆ ಗಂಭೀರ ಪೆಟ್ಟಾಗಿದೆ. ಕೂಡಲೇ ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಆಕೆ ಮೃತಪಟ್ಟಿದ್ದಾಳೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳೀಯ ಶಾಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ಈಕೆ ಭಜನೆ ಹಾಡುಗಳನ್ನು ಹಾಡುವುದರಲ್ಲಿ ಗುರುತಿಸಲ್ಪತ್ತಿದ್ದಳು.