ರಾಷ್ಟ್ರಮಟ್ಟದ ಪವರ್ ಲಿಫ್ಟರ್ ಕಟ್ಟಡದಿಂದ ಬಿದ್ದು ಮೃತ್ಯು

ಮಂಗಳೂರು: ರಾಷ್ಟ್ರಮಟ್ಟದ ಪವರ್ ಲಿಫ್ಟರ್ ಉಳ್ಳಾಲ ಧರ್ಮನಗರ ನಿವಾಸಿ ಸಂತೋಷ್ ಪೂಜಾರಿ (45) ಕಟ್ಟಡದಿಂದ ಬಿದ್ದು ದಾರುಣ ಮೃತಪಟ್ಟ ಘಟನೆ ನಗರದ ಪದವಿನಂಗಡಿ ಬಳಿಯಲ್ಲಿ ಬೆಳಕಿಗೆ ಬಂದಿದೆ.
ಹೊಸ ಕಟ್ಟಡವೊಂದರ ನಾಲ್ಕನೇ ಮಹಡಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ವೇಳೆ ಸಂತೋಷ್ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾರೆ ಎಂದು ಹೇಳಲಾಗಿದೆ.
ಸಂತೋಷ್‌ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!