ಜೂ.12ಕ್ಕೆ ತಮಿಳುನಾಡು ಸಿಎಂ ವಿಜಯ್ ಕೊಲ್ಲೂರಿಗೆ: ಬಿಗಿ ಭದ್ರತಾ ವ್ಯವಸ್ಥೆ!

ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಜೂನ್ 12 ಶುಕ್ರವಾರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿದ್ದು ಅವರು Z+ ಶ್ರೇಣಿಯ ಭದ್ರತಾ ವ್ಯವಸ್ಥೆ ಹೊಂದಿರುವುದರಿಂದ ಹೆಚ್ಚಿನ ಭದ್ರತಾ ವ್ಯವಸ್ಥೆ ಮಾಡಲು ಕರ್ನಾಟಕ ಪೊಲೀಸರು ಮತ್ತು ಗುಪ್ತಚರ ಸಂಸ್ಥೆಗಳನ್ನು ಕೋರಲಾಗಿದೆ.
ಮಧ್ಯಾಹ್ನ 12.30 ಕ್ಕೆ ವಿಶೇಷ ವಿಮಾನದ ಮೂಲಕ ನವದೆಹಲಿಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು ನಂತರ ರಸ್ತೆ ಮಾರ್ಗದ ಮೂಲಕ ಬೈಂದೂರು ತಾಲ್ಲೂಕಿನ ಕೊಲ್ಲೂರಿಗೆ ತೆರಳಿ ದರ್ಶನ ಪಡೆಯಲಿದ್ದಾರೆ. ಭೇಟಿಯ ನಂತರ ಮಂಗಳೂರು ವಿಮಾನ ನಿಲ್ದಾಣಕ್ಕೆ ಹಿಂತಿರುಗಿ ವಿಶೇಷ ವಿಮಾನದ ಮೂಲಕ ಚೆನ್ನೈಗೆ ತೆರಳಲಿದ್ದಾರೆ ಎಂದು ತಮಿಳುನಾಡು CID ಭದ್ರತಾ ಶಾಖೆಯ ಅಧಿಕೃತ ಮಾಹಿತಿಗಳು ತಿಳಿಸಿವೆ.
ವಿಮಾನ ನಿಲ್ದಾಣ, ದೇವಾಲಯದ ಆವರಣ ಮತ್ತು ಪ್ರಯಾಣ ಮಾರ್ಗದಲ್ಲಿ ಕಟ್ಟುನಿಟ್ಟಾದ ಪ್ರವೇಶ ನಿಯಂತ್ರಣ ಮತ್ತು ವಿಧ್ವಂಸಕ ಕೃತ್ಯಗಳ ತಪಾಸಣೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

error: Content is protected !!