
ಮಂಗಳೂರು : ಭಾರತದ ಯಶಸ್ವಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ 12 ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಮಂಗಳೂರು ಉತ್ತರದ ವತಿಯಿಂದ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ರಂಗಪೂಜೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಶುಭ ಕಾರ್ಯದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ದೇಶವು ಇನ್ನಷ್ಟು ಅಭಿವೃದ್ಧಿ ಕಾಣಲಿ ಎಂದು ಪ್ರಾರ್ಥಿಸಿ, ಅವರ ಮುಂದಿನ ಸೇವಾ ಪಯಣವು ಯಶಸ್ವಿಯಾಗಲೆಂದು ಹಾರೈಸಲಾಯಿತು.

ಈ ಧಾರ್ಮಿಕ ಕಾರ್ಯಕ್ರಮದಲ್ಲಿ, ಮಂಡಲ ಅಧ್ಯಕ್ಷರಾದ ರಾಜೇಶ್ ಕೊಟ್ಟಾರಿ, ಪ್ರಧಾನ ಕಾರ್ಯದರ್ಶಿಗಳಾದ ರಣ್ ದೀಪ್ ಕಾಂಚನ್, ಸಂದೀಪ್ ಪಚ್ಚನಾಡಿ ಹಾಗೂ ಪಕ್ಷದ ವಿವಿಧ ಪದಾಧಿಕಾರಿಗಳು, ಮಾಜಿ ಕಾರ್ಪರೇಟರ್ ಗಳು, ಮುಖಂಡರು, ಕಾರ್ಯಕರ್ತರು ಹಾಗೂ ಭಕ್ತಾದಿಗಳು ಭಾಗವಹಿಸಿದರು.
