
ಬೆಳ್ತಂಗಡಿ: ವಿವಾಹಿತ ಮಹಿಳೆಯನ್ನು ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಠಾಣಾ ಪೊಲೀಸರು ಆರೋಪಿ ಪೋಸ್ಟ್ ಮ್ಯಾನ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿ ಅರಸಿಮಕ್ಕಿಯ ಪೋಸ್ಟ್ ಮ್ಯಾನ್ ಆಗಿರುವ ಸುರೇಶ್ (35) ಬಂಧಿತ ಆರೋಪಿಯಾಗಿದ್ದಾನೆ.
ಘಟನೆಯ ವಿವರ:
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು 2023ರ ಡಿಸೆಂಬರ್ ನಲ್ಲಿ ತನ್ನ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.7ರಂದು ದೂರು ನೀಡಿದ್ದರು. ತನಿಖೆ ನಡೆಸಿದ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿ ಜೂ.9 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
