
ವಾಷಿಂಗ್ಟನ್: ಇರಾನ್ ಜೊತೆ ಶಾಂತಿ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಹಾರ್ಮುಜ್ ಜಲಸಂಧಿ ಮತ್ತೆ ತೆರೆಯಲಾಗುವುದು ಆ ಬಳಿಕ ಅಮೆರಿಕದ ನೌಕಾ ದಿಗ್ಬಂಧನವನ್ನು ತಕ್ಷಣವೇ ತೆಗೆದುಹಾಕಲಾಗುವುದು ಎಂದು ತಿಳಿಸಿದ್ದಾರೆ.
ಟ್ರೂತ್ ಸೋಶಿಯಲ್ ಪ್ಲಾಟ್‌ಫಾರ್ಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಟ್ರಂಪ್, ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನೊಂದಿಗಿನ ಒಪ್ಪಂದವು ಈಗ ಪೂರ್ಣಗೊಂಡಿದೆ. ಎಲ್ಲರಿಗೂ ಅಭಿನಂದನೆಗಳು! ಹಾರ್ಮುಜ್ ಜಲಸಂಧಿಯನ್ನು ಟೋಲ್-ಫ್ರೀ ಆಗಿ ತೆರೆಯಲು ನಾನು ಈ ಮೂಲಕ ಸಂಪೂರ್ಣವಾಗಿ ಅಧಿಕಾರ ನೀಡುತ್ತೇನೆ. ಅದೇ ಸಮಯದಲ್ಲಿ ಯುನೈಟೆಡ್ ಸ್ಟೇಟ್ಸ್ ನೌಕಾ ದಿಗ್ಬಂಧನವನ್ನು ತಕ್ಷಣ ತೆಗೆದುಹಾಕಲು ಅಧಿಕಾರ ನೀಡುತ್ತೇನೆ ಎಂದಿದ್ದಾರೆ.
