
ಮಂಗಳೂರು: ನಗರದ ಕೊಟ್ಟಾರ ಚೌಕಿಯಲ್ಲಿ ಕಚೇರಿಯನ್ನು ಹೊಂದಿದ್ದ ಉದ್ಯಮಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ಸುನೀಲ್ ಬಿ.ಎಸ್.(36) ಎಂದು ಗುರುತಿಸಲಾಗಿದೆ.
ಸುನೀಲ್ ಬಿಜೈನಲ್ಲಿ ಬಾಡಿಗೆ ಕೊಠಡಿಯಲ್ಲಿ ವಾಸಿಸುತ್ತಿದ್ದು ಜೂನ್ 12 ರಾತ್ರಿ 9 ಗಂಟೆಗೆ ತಮ್ಮ ಸಹೋದರಿಯ ಮೊಬೈಲ್‌ಗೆ ಮೆಸೇಜ್ ಕಳುಹಿಸಿದ್ದು ಬಳಿಕ ಅವರ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಅಂದಿನಿಂದ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಉರ್ವ ಪೊಲೀಸರಿಗೆ ನೀಡಿರುವ ದೂರಿನಲ್ಲಿ ವಿವರಿಸಲಾಗಿದೆ.
