
ಬಂಟ್ವಾಳ: ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ದಾರುಣ ಮೃತಪಟ್ಟ ಘಟನೆ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಅನೇಜ ಛಾಯ ಎಂಬವರ ಮಗಳು ಸಾವನ್ನಪ್ಪಿದ ದುರ್ದೈವಿಯಾಗಿದ್ದಾಳೆ. ಬಂಟ್ವಾಳ ದೇವಳ ಶಾಲೆಯಲ್ಲಿ ಯು.ಕೆ.ಜಿ. ಕಲಿಯುತ್ತಿದ್ದ ಬಾಲಕಿಯನ್ನು ಆದಿತ್ಯವಾರ ತೀವ್ರ ಜ್ವರದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನಳಾಗಿದ್ದಾಳೆ. ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
