ಪೋಕ್ಸೋ ಕೇಸ್: ವಿಚಾರಣೆಗೆ ಹಾಜರಾಗದೇ ತಲೆಮರೆಸಿದ್ದ ಆರೋಪಿ ದಸ್ತಗಿರಿ

ಪುತ್ತೂರು: ನಗರ ಪೊಲೀಸ್ ಠಾಣಾ ಅ.ಕ್ರ: 53/2018, ಕಲಂ 448, 506, 354 ಐಪಿಸಿ & ಕಲಂ 12 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ಪುತ್ತೂರು ನರಿಮೊಗರು ನಿವಾಸಿ ನಮನ್ ನಾಯಕ್ (32) ಎಂಬಾತನನ್ನು ಪುತ್ತೂರು ನಗರ ಪೊಲೀಸರು ಬೆಂಗಳೂರಿನ ಕೂಡ್ಲುಪೇಟೆ ಎಂಬಲ್ಲಿ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

error: Content is protected !!