ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಉಳಿದಿರುವ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ

ಮಂಗಳೂರು: ಮಂಗಳೂರಿನ ಬೈಕಂಪಾಡಿಯಲ್ಲಿರುವ ಸರಕಾರಿ ಜಿ.ಟಿ.ಟಿ.ಸಿ ಡಿಪ್ಲೋಮಾ ಕಾಲೇಜಿನಲ್ಲಿ 2026-27ನೇ ಡಿಪ್ಲೋಮಾ ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆ ನಡೆಯುತ್ತಿದ್ದು, ಮೆಕ್ಯಾನಿಕಲ್ ಇಂಜಿನಿಯರಿಂಗ್‌ಗೆ ಸಂಬಂಧಿಸಿದ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಮತ್ತು ಡಿಪ್ಲೋಮಾ ಇನ್ ಪ್ರಿಸಿಷನ್ ಮಾನ್ಯುಫ್ಯಾಕ್ಟರಿಂಗ್ ಹಾಗೂ ಕಂಪ್ಯೂಟ‌ರ್ ಸೈನ್ಸ್‌ಗೆ ಸಂಬಂಧಿಸಿದ ಡಿಪ್ಲೋಮಾ ಇನ್ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್ ಕೋರ್ಸುಗಳಲ್ಲಿ ಕೆಲವು ಸೀಟುಗಳು ಖಾಲಿ ಇವೆ. ಈ ಸೀಟುಗಳನ್ನು ನೇರವಾಗಿ ಕಾಲೇಜಿನಲ್ಲಿ ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ಸ್ಥಳದಲ್ಲಿ ಪ್ರವೇಶಾತಿ ನೀಡಲಾಗುವುದು. ಈ ಎಲ್ಲಾ ಕೋರ್ಸುಗಳ ಅವಧಿಯು 4 ವರ್ಷಗಳಾಗಿದ್ದು. ವಿದ್ಯಾರ್ಥಿಗಳಿಗೆ ಅಂತಿಮ ವರ್ಷದ ಅವಧಿಯಲ್ಲಿ ಪ್ರತಿಷ್ಠಿತ ಕಂಪೆನಿಗಳಲ್ಲಿ ಒಂದು ವರ್ಷದ ಕಡ್ಡಾಯ ಇಂಟರ್ನ್‌ ಶಿಪ್ ವ್ಯವಸ್ಥೆ ಕಲ್ಪಿಸಲಾಗುವುದು ಮತ್ತು ಕಡ್ಡಾಯವಾಗಿ ವಿದ್ಯಾರ್ಥಿಗಳು ಪ್ರತಿ ತಿಂಗಳು ರೂ.18,000-23,000/- ವರೆಗೆ ಸ್ಟೈಪೆಂಡ್ ಪಡೆಯುತ್ತಾರೆ. ಎಸ್. ಎಸ್. ಎಲ್. ಸಿ. ಪಾಸಾದ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸುವಂತೆ ಪ್ರಾಂಶುಪಾಲರು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0824-2408003 ಅನ್ನು ಸಂಪರ್ಕಿಸಬಹುದಾಗಿದೆ.

error: Content is protected !!