
ಮಂಗಳೂರು: ಎಂಆರ್‌ಪಿಎಲ್ ಎಸ್‌ಸಿ/ಎಸ್‌ಟಿ ನೌಕರರ ಕಲ್ಯಾಣ ಸಂಘ (MSSEWA), ಮಂಗಳೂರು ವತಿಯಿಂದ ಕಾವೂರು ಗಾಂಧಿನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಕಾರ್ಪೊರೇಟರ್ ಸುಮಂಗಲಾ, ಎಸ್‌ಡಿಎಂಸಿ ಅಧ್ಯಕ್ಷೆ ಶೀಬಾ, ಸಮಾಜಸೇವಕ ಪ್ರಕಾಶ್ ರಾವ್ ಹಾಗೂ MSSEWA ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಬೀನಾ ಬಾನು ನಿರೂಪಿಸಿದರು.
ಶಾಲಾ ಆವರಣದಲ್ಲಿ ವೃಕ್ಷಾರೋಪಣ ಕಾರ್ಯಕ್ರಮ ನಡೆಸಿ ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಅರಿವು ಮೂಡಿಸಲಾಯಿತು.
ವೃತ್ತಿ ಮಾರ್ಗದರ್ಶನ ಉಪನ್ಯಾಸವನ್ನು ಮಾಜಿ ಪತ್ರಕರ್ತ ಶ್ರೀನಿವಾಸನ್ ನಂದಗೋಪಾಲ್ ಅವರು ನಡೆಸಿ, ವಿದ್ಯಾರ್ಥಿಗಳಿಗೆ ವಿವಿಧ ವೃತ್ತಿ ಅವಕಾಶಗಳು ಮತ್ತು ಶೈಕ್ಷಣಿಕ ಯೋಜನೆಗಳ ಕುರಿತು ಮಾರ್ಗದರ್ಶನ ನೀಡಿದರು.

MSSEWA ಅಧ್ಯಕ್ಷರದ ಯುವರಾಜ್ ಇವರು ವೃಕ್ಷಾರೋಪಣೆಯ ಮಹತ್ವವನ್ನು ಒತ್ತಿಹೇಳಿ, ಈ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಲು ಸಹಕರಿಸಿದ ಶಾಲಾ ಸಮಿತಿಗೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ MSSEWA ವತಿಯಿಂದ ಶಾಲೆಗೆ “What Next…?” ವೃತ್ತಿ ಮಾರ್ಗದರ್ಶನ ಪುಸ್ತಕಿಕೆಯನ್ನು ಉಡುಗೊರೆಯಾಗಿ ನೀಡಲಾಯಿತು.
ಕಾರ್ಯಕ್ರಮದ ಕೊನೆಯಲ್ಲಿ ವಿಲಿಯಂ ಕೊಲಾಸೋ ಅವರು ವಂದನಾರ್ಪಣೆ ಸಲ್ಲಿಸಿದರು ಹಾಗೂ ಶಾಲೆಯ ಮುಖ್ಯೋಪಾಧ್ಯಾಯರಾದ ಕರುಣ ಎಸ್. ಅವರು ಧನ್ಯವಾದಗಳನ್ನು ಅರ್ಪಿಸಿದರು.