ಕೃಷ್ಣ ಶೆಣೈ ನಿಧನಕ್ಕೆ ಮಂಜುನಾಥ ಭಂಡಾರಿ ತೀವ್ರ ಸಂತಾಪ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಸದಸ್ಯರಾಗದ್ದ ಕೃಷ್ಣ ಶೆಣೈ ಅವರ ನಿಧನ ಕ್ರೀಡಾಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ವಿಧಾನ ಪರಿಷತ್ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತೀವ್ರ ಸಂತಾಪ ಸೂಚಿಸಿದ್ದಾರೆ.
ತಮ್ಮದು ಸುಮಾರು 45 ವರ್ಷಗಳ ಸ್ನೇಹ ಸಂಬಂಧ ಎಂದಿರುವ ಅವರು, ನಾವು ಇಂದು ಒಬ್ಬ ಉತ್ತಮ ಸ್ನೇಹಿತನನ್ನಷ್ಟೇ ಅಲ್ಲ, ಕ್ರೀಡಾಭಿವೃದ್ಧಿಗೆ ತಮ್ಮ ಜೀವನವನ್ನೇ ಸಮರ್ಪಿಸಿದ್ದ ಒಬ್ಬ ಸಮರ್ಪಿತ ಕ್ರೀಡಾ ಪ್ರೋತ್ಸಾಹಕರನ್ನು ಕಳೆದುಕೊಂಡಿದ್ದೇವೆ. ದಕ್ಷಿಣ ಕನ್ನಡ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಮೂಲಕ ಅವರು ಅನೇಕ ಪ್ರತಿಭಾವಂತ ಕ್ರೀಡಾಪಟುಗಳನ್ನು ರೂಪಿಸಿ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟಕ್ಕೆ ಬೆಳೆಸಿದ ಸೇವೆ ಸದಾ ಸ್ಮರಣೀಯ ಎಂದು ಕೃಷ್ಣ ಶೆಣೈ ಅವರ ಕ್ರೀಡಾ ಸ್ಫೂರ್ತಿಯನ್ನು ಸ್ಮರಿಸಿದ್ದಾರೆ.
ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಮತ್ತು ಧೈರ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

error: Content is protected !!